ಇಂದು ಸಂಜೆ ಕಾಂಗ್ರೆಸ್ ಹೈಕಮಾಂಡ್ ನೂತನ ಅಧ್ಯಕ್ಷರನ್ನ ಆಯ್ಕೆ?

ಇಂದು ಸಂಜೆ ಕಾಂಗ್ರೆಸ್ ಹೈಕಮಾಂಡ್ ನೂತನ ಅಧ್ಯಕ್ಷರನ್ನ ಆಯ್ಕೆ?

ನವದೆಹಲಿ, ಆ. 10: ಕಾಂಗ್ರೆಸ್ನ ಮುಂದಿನ ಅಧ್ಯಕ್ಷ ಯಾರಾಗುತ್ತಾರೆ ಎನ್ನುವ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಇಂದು ಸಿಗುತ್ತದೆ ಎಂದು ಹೇಳಲಾದರೂ ಈ ಬಗ್ಗೆ ಹೆಚ್ಚಿನ ಬೆಳವಣಿಗೆಗಳು ನಡೆದಿಲ್ಲ. ಏತನ್ಮಧ್ಯೆ ಮುಂದಿನ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ತಾವು ತಲೆ ಹಾಕದಿರಲು ಕಾಂಗ್ರೆಸ್ನ ಪರಮೋತ್ಛ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಯವರು ನಿರ್ಧರಿಸಿದ್ದಾರೆ. ಜೊತೆಗೆ ಆಯ್ಕೆ ವಿಚಾರವನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮತ್ತು ಎಲ್ಲ ರಾಜ್ಯಗಳ ಪ್ರಾದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಿಗೆ ಬಿಟ್ಟುಬಿಟ್ಟಿದ್ದಾರೆ. ಇಂದು ಸಂಜೆ ಕಾಂಗ್ರೆಸ್ ಹೈಕಮಾಂಡ್ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

ಇಂದು ಸಭೆ ಸೇರಿದ ಸಿಡಬ್ಲ್ಯೂ ಸಿ ಐದು ಗುಂಪುಗಳನ್ನು ರಚಿಸಿ ಅಧ್ಯಕ್ಷರ ಆಯ್ಕೆಗೆ ಅವುಗಳ ಸಲಹೆಗಳನ್ನು ಪಡೆಯುವ ಬಗ್ಗೆ ತೀರ್ಮಾನಿಸಿತು. ಇದೊಂದು ಪ್ರಕ್ರಿಯೆಯಾಗಿದ್ದು ಇದರಲ್ಲಿ ಭಾಗಿಯಾಗದೇ ಇರಲು ರಾಹುಲ್ ಸೋನಿಯಾ ತೀರ್ಮಾನಿಸಿದ್ದಾರೆ ಎಂದು ಸಮಿತಿ ಹೇಳಿದೆ.

 

ಫ್ರೆಶ್ ನ್ಯೂಸ್

Latest Posts

Featured Videos