ಇಂದಿನಿಂದ ಜೂ.30 30ರವರೆಗೆ ಕಂದಾಯ ಇಲಾಖೆಯಲ್ಲಿ ಕಡತ ವಿಲೇವಾರಿ ಸಪ್ತಾಹ

ಇಂದಿನಿಂದ ಜೂ.30 30ರವರೆಗೆ ಕಂದಾಯ ಇಲಾಖೆಯಲ್ಲಿ ಕಡತ ವಿಲೇವಾರಿ ಸಪ್ತಾಹ

ಧಾರವಾಡ, ಜೂ. 24: ಕಂದಾಯ ಇಲಾಖೆಯಲ್ಲಿ ಇತ್ಯರ್ಥವಾಗದೇ ಬಾಕಿ ಉಳಿದಿರುವ ಕಡತಗಳನ್ನು ವಿಲೇವಾರಿ ಮಾಡುವ ಉದ್ದೇಶದಿಂದ ಇಂದಿನಿಂದ ಜೂ. 30ರವರೆಗೆ ಕಡತ ವಿಲೇವಾರಿ ಸಪ್ತಾಹ ಹಮ್ಮಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

ಈ ಕುರಿತು ಭಾನುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಪ್ತಾಹದ ಅವಧಿಯಲ್ಲಿ ಸಾಮಾನ್ಯ ಕಡತಗಳ ಜತೆಗೆ ವಿಶೇಷವಾಗಿ ದೀರ್ಘ ಕಾಲದಿಂದ ಬಾಕಿ ಉಳಿದ ಕಡತ ವಿಲೇವಾರಿ ಮಾಡಲಾಗುವುದು. ಕಡತಗಳ ಶೀಘ್ರ ವಿಲೇವಾರಿಯಲ್ಲಿ ಪಾರದರ್ಶಕತೆ ನಿಯಮ ಕಾಯ್ದುಕೊಳ್ಳುವ ಕುರಿತು ಇಲಾಖೆ ಮುಖ್ಯಸ್ಥರು, ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮಾರ್ಗದರ್ಶನ ಮಾಡಬೇಕು ಎಂದು ಸಚಿವರು ಸೂಚಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos