ಇಂದು ಜಾರ್ಖಂಡ್ ವಿಧಾಸನಭಾ ಚುನಾವಣೆಯ

ಇಂದು ಜಾರ್ಖಂಡ್ ವಿಧಾಸನಭಾ ಚುನಾವಣೆಯ

ಜಾರ್ಖಂಡ್, ನ. 30: ಇಂದು ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಒಟ್ಟು 5 ಹಂತಗಳಲ್ಲಿ ಮತದಾನ ನಡೆಯಲಿದ್ದು, ಇಂದು ಮೊದಲ ಹಂತದ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದೆ.

ಈ ಚುನಾವಣೆಯಲ್ಲಿ ಪ್ರಮುಖ ಪಕ್ಷಗಳಾಗಿ ಬಿಜೆಪಿ, ಕಾಂಗ್ರೆಸ್, ಜಾರ್ಖಂಡ್ ವಿಕಾಸ್ ಮೋರ್ಚಾ, ಆಲ್ ಜಾರ್ಖಂಡ್ ಸ್ಟೂಡೆಂಟ್ಸ್ ಯೂನಿಯನ್, ಜಾರ್ಖಂಡ್ ಮುಕ್ತಿ ಮೋರ್ಚಾ, ಮತ್ತು ರಾಷ್ಟ್ರೀಯ ಜನತಾ ದಳ ಪಕ್ಷಗಳು ಹಣಾಹಣಿಗಿಳಿದಿವೆ.

ಒಟ್ಟು 81 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದ ಮತದಾನದಲ್ಲಿ 13 ಕ್ಷೇತ್ರಗಳಲ್ಲಿ ಇಂದು ಮತದಾನ ಪ್ರಾರಂಭವಾಗಿದೆ. 2ನೇ ಹಂತದಲ್ಲಿ 20 ಕ್ಷೇತ್ರಗಳು, 3ನೇ ಹಂತದಲ್ಲಿ 17 ಕ್ಷೇತ್ರಗಳು, 4ನೇ ಹಂತದಲ್ಲಿ 15 ಕ್ಷೇತ್ರಗಳು ಹಾಗೂ 5ನೇ ಹಂತದಲ್ಲಿ 16 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

 

ಫ್ರೆಶ್ ನ್ಯೂಸ್

Latest Posts

Featured Videos