ಇಂದಿನ ಪಂದ್ಯ ಹೈವೋಲ್ಟೇಜ್ ಮ್ಯಾಚ್! ಭಾರತ-ಪಾಕಿಸ್ತಾನ

ಇಂದಿನ ಪಂದ್ಯ ಹೈವೋಲ್ಟೇಜ್ ಮ್ಯಾಚ್! ಭಾರತ-ಪಾಕಿಸ್ತಾನ

ಏಷ್ಯಾ ಕಪ್ 2023ರ ಟೂರ್ನಿಯಲ್ಲಿ ಇಂದು ಅತ್ಯಂತ ರೋಚಕವಾದ ಪಂದ್ಯ ಆಡಳಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಇವರಿಬ್ಬರ ಕಾಲಘವನ್ನು ನೋಡಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಭಾರತ ತಂಡವು ಇಂದು ಪಾಕಿಸ್ತಾನ ತಂಡವನ್ನು ಸೋಲಿಸಿ ಜಯಭೇರಿಯನ್ನು ಸಾಧಿಸಬೇಕೆಂಬುದು ನಮ್ಮೆಲ್ಲರ ಆಶಯವಾಗಿದೆ.

ಇಂದು ಸಾಂಪ್ರದಾಯಿಕ ಎದುರಾಳಿಗರಾದ ಭಾರತ ಹಾಗೂ ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಪಲ್ಲೆಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಈ ರಣರೋಚಕ ಕದನಕ್ಕೆ ಸಾಕ್ಷಿಯಾಗಲಿದೆ. ಈಗಾಗಲೇ ನೇಪಾಳ ವಿರುದ್ಧ ಮೊದಲ ಪಂದ್ಯದಲ್ಲಿ ಗೆದ್ದು ಆತ್ಮವಿಶ್ವಾದಲ್ಲಿರುವ ಪಾಕ್, ಇಂದಿನ ಪಂದ್ಯ ಕೂಡ ಗೆದ್ದರೆ ಸೂಪರ್-4 ಹಂತಕ್ಕೆ ತೇರ್ಗಡೆ ಆಗಲಿದೆ. ಇತ್ತ ಟೀಮ್ ಇಂಡಿಯಾ ಚೊಚ್ಚಲ ಪಂದ್ಯದಲ್ಲಿ ಗೆಲುವು ಎದುರು ನೋಡುತ್ತಿದೆ. ಉಭಯ ತಂಡಗಳಲ್ಲಿ ಸ್ಟಾರ್ ಆಟಗಾರರ ದಂಡೇ ಇದ್ದು, ಇಡೀ ಕ್ರಿಕೆಟ್ ಜಗತ್ತಿನ ಕಣ್ಣು ಈ ಪಂದ್ಯದ ಮೇಲಿದೆ.

ಟೀಮ್ ಇಂಡಿಯಾಕ್ಕೆ ಪ್ಲೇಯಿಂಗ್ ಇಲೆವೆನ್ನದ್ದೇ ಚಿಂತೆ. ಕೆಎಲ್ ರಾಹುಲ್ ಅಲಭ್ಯರಾಗಿರುವ ಕಾರಣ ಭಾರತದ ಬ್ಯಾಟಿಂಗ್ ಕ್ರಮಾಂಕದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ. ರಾಹುಲ್ ಆಡದ ಕಾರಣ ವಿಕೆಟ್ ಕೀಪಿಂಗ್ ಜವಾಬ್ದಾರಿ ಇಶಾನ್ ಕಿಶನ್ ಹೊರಲಿದ್ದಾರೆ. ಹೀಗಾದಾಗ ರೋಹಿತ್, ಗಿಲ್, ಕಿಶನ್ ಹೀಗೆ ಓಪನಿಂಗ್ ಸ್ಲಾಟ್ಗೆ ಮೂರು ಆಯ್ಕೆಗಳು ಎದುರಾಗುತ್ತದೆ. ಆರಂಭಿಕನಾಗಿ ಯಶಸ್ಸು ಸಾಧಿಸಿರುವ ಕಿಶನ್ಗೆ ಯಾವ ಸ್ಥಾನ ನೀಡುವುದು ಎಂಬುದು ರೋಹಿತ್-ದ್ರಾವಿಡ್ ತಲೆನೋವಾಗಿದೆ. ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಮೂರೂ ಮತ್ತು ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

ಜಡೇಜಾ-ಹಾರ್ದಿಕ್ ಆಲ್ರೌಂಡರ್ಗಳಾದರೆ, ಕುಲ್ದೀಪ್ ಯಾದವ್ ಸ್ಪಿನ್ನರ್ ಆಗಿದ್ದಾರೆ. ಜಸ್ಪ್ರಿತ್ ಬುಮ್ರಾ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ಇವರ ಜೊತೆಗೆ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಥಾಕೂರ್, ಪ್ರಸಿದ್ಧ್ ಕೃಷ್ಣ ಹೀಗೆ ನಾಲ್ಕು ಆಯ್ಕೆಗಳಿವೆ. ಒಟ್ಟಾರೆ ಟೀಮ್ ಇಂಡಿಯಾ ಸ್ಟಾರ್ ಆಟಗಾರರಿಂದ ಕೂಡಿದ್ದರೂ ತಂಡದ ಪ್ಲೇಯಿಂಗ್ ಇಲೆವೆನ್ ಕಟ್ಟುವುದು ದೊಡ್ಡ ಸವಾಲಾಗಿದೆ. ಹೀಗಾಗಿ ಪಾಕ್ ವಿರುದ್ಧದ ಪಂದ್ಯದಲ್ಲಿ ಯಾರೆಲ್ಲ ಆಡುತ್ತಾರೆ ಎಂಬುದು ನೋಡಬೇಕಿದೆ.
ಇದು ನಿಧಾನಗತಿಯ ಪಿಚ್ ಆಗಿರುವುದರಿಂದ ಬ್ಯಾಟ್ಸ್ಮನ್ಗಳು ರನ್ ಕದಿಯಲು ಪರದಾಡುವುದನ್ನು ಕಾಣಬಹುದು. ಇಲ್ಲಿ ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡುವುದು ಉತ್ತಮ. ಈ ಮೈದಾನದಲ್ಲಿ ರನ್ ಚೇಸ್ನ ದಾಖಲೆಯು ಅತ್ಯುತ್ತಮವಾಗಿದೆ. ಅಂಕಿಅಂಶಗಳ ಪ್ರಕಾರ, ಮೊದಲು ಬ್ಯಾಟಿಂಗ್ ಮಾಡಿದ ತಂಡವು 34 ಪಂದ್ಯಗಳಲ್ಲಿ 14 ರಲ್ಲಿ ಮಾತ್ರ ಗೆದ್ದಿದ್ದರೆ, 19 ಪಂದ್ಯಗಳಲ್ಲಿ ಮೊದಲು ಫೀಲ್ಡಿಂಗ್ ಮಾಡಿದ ತಂಡ ಗೆಲುವು ಸಾಧಿಸಿದೆ. ಇಲ್ಲಿ ವೇಗಿಗಳಿಗಿಂತ ಸ್ಪಿನ್ನರ್ಗಳೇ ಹೆಚ್ಚು ಮಿಂಚಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. ಪಂದ್ಯಕ್ಕೆ ಅರ್ಧಗಂಟೆ ಮೊದಲು ಟಾಸ್ ನಡೆಯಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿನೋಡಬಹುದು. ಇದಲ್ಲದೆ, ಇದನ್ನು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನ ಮೊಬೈಲ್‌ನಲ್ಲಿಯೂ ಉಚಿತವಾಗಿ ವೀಕ್ಷಿಸಬಹುದು.

ಫ್ರೆಶ್ ನ್ಯೂಸ್

Latest Posts

Featured Videos