ಶಾಲಾ ಮಕ್ಕಳ ಕೈಯಲ್ಲಿ ಶೌಚಾಲಯ ಕ್ಲೀನಿಂಗ್!!

ಶಾಲಾ ಮಕ್ಕಳ ಕೈಯಲ್ಲಿ ಶೌಚಾಲಯ ಕ್ಲೀನಿಂಗ್!!

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಹಲವಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅದರಲ್ಲಿ ಸಹ ಸಾಮಾನ್ಯ ವರ್ಗದವರು ಹೆಚ್ಚಾಗಿ ಸರ್ಕಾರಿ ಶಾಲೆಗಳಿಗೆ ಹೋಗುತ್ತಿರುತ್ತಾರೆ. ರಾಜ್ಯದ ರಾಜಧಾನಿಯಲ್ಲಿ ದಿನನಿತ್ಯ ನಾವು ಜೀವನ ನಡೆಸುವುದೇ ತುಂಬಾ ಕಷ್ಟಕರವಾಗಿದೆ ಅದರಲ್ಲಿ ಸಹ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವಷ್ಟು ಹಣ ನಮ್ಮಲ್ಲಿ ಇರುವುದಿಲ್ಲ ಆದ ಕಾರಣ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿರುತ್ತಾರೆ.  ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸವು ಚೆನ್ನಾಗಿದ್ದು ಹಾಗೂ ಮಕ್ಕಳು ಹೆಚ್ಚು ಕಲಿಕೆಯನ್ನು ಕಲಿಯುತ್ತಾರೆ. ಆದರೆ ಬೆಂಗಳೂರಿನಲ್ಲಿ ನಡೆದಂತ ಘಟನೆ ವಿದ್ಯಾರ್ಥಿಗಳ ಕೈಯಲ್ಲಿ ಶಾಲೆಗಳಲ್ಲಿ ಬಿದ್ದಿರುವಂತಹ ಕಸ ಕಡ್ಡಿಗಳನ್ನು ಹಾಗೂ ಶೌಚಾಲಯಗಳನ್ನು ಕ್ಲೀನ್ ಮಾಡಿಸುತ್ತಿರುವಂತಹ ವಿಷಯ ಬೆಳಕಿಗೆ ಬಂದಿದೆ.

ವಿದ್ಯಾರ್ಥಿಗಳ ಕೈಯಲ್ಲಿ ಶಿಕ್ಷಕರು ಶೌಚಾಲಯ ಕ್ಲೀನ್  ಮಾಡಿಸಿದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರು ಮಕ್ಕಳ ಕೈಯಲ್ಲಿ ಶೌಚಾಲಯ ಕ್ಲೀನ್ ಮಾಡಿಸಿದ್ದು ಈ ಸಂಬಂಧ ಶಾಲೆಯ ಶಿಕ್ಷಕರ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ಹೊರ ಹಾಕಿದ್ದಾರೆ. ಒಬ್ಬ ವಿದ್ಯಾರ್ಥಿ ಕ್ಲೀನಿಂಗ್ ಆ್ಯಸಿಡ್ ಹಾಕ್ತಿದ್ರೆ, ಮತ್ತೊಬ್ಬ ಪೊರಕೆ ಹಿಡಿದು ಗುಡಿಸುತ್ತಿದ್ದಾರೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಪೋಷಕರು ಶಾಲೆಗೆ ಆಗಮಿಸಿ ಮುಖ್ಯಶಿಕ್ಷಕಿಯನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳೀಯರು ಪ್ರತಿಭಟನೆಯನ್ನ ಮಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos