ನಾಳೆ ಭಾರತ-ಆಸ್ಟ್ರೇಲಿಯಾ ಏಕದಿನ ಪಂದ್ಯ

ನಾಳೆ ಭಾರತ-ಆಸ್ಟ್ರೇಲಿಯಾ ಏಕದಿನ ಪಂದ್ಯ

ಮುಂಬೈ,ಜ. 13 : ಭಾರತ, ಆಸ್ಟ್ರೇಲಿಯಾ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಗೆ ಸಜ್ಜಾಗಿದ್ದು, ನಾಳೆ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಮೊದಲ ಹಣಾಹಣಿಯಲ್ಲಿ ಮುಖಾಮುಖಿಯಾಗುತ್ತಿವೆ. ಕಳೆದ ಏಕದಿನ ಸರಣಿಯಲ್ಲಿ ಸೋಲು ಅನುಭವಿಸಿದ್ದ ಕೊಹ್ಲಿ ಪಡೆ ಇದೀಗ ಆಸ್ಟ್ರೇಲಿಯಾ ವಿರುದ್ಧ ಸೇಡು ತೀರಿಸಿಕೊಳ್ಳಲು ಎದುರು ನೋಡುತ್ತಿದೆ.
ಕಳೆದ ವರ್ಷ ಭಾರತದಲ್ಲಿ ನಡೆದಿದ್ದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ 2-0 ಮುನ್ನಡೆ ಗಳಿಸಿತ್ತು. ಆದಾಗ್ಯೂ, ನಂತರ ಪುಟಿದೆದ್ದ ಪ್ರವಾಸಿ ಆಸ್ಟ್ರೇಲಿಯಾ ತಂಡ ಸತತ ಮೂರೂ ಪಂದ್ಯಗಳನ್ನು ಗೆದ್ದು ಸರಣಿಯನ್ನು 3-2 ಅಂತರದಲ್ಲಿ ಏಕದಿನ ಸರಣಿಯನ್ನು ವಶಪಡಿಸಿಕೊಂಡಿತ್ತು. ಈ ಫಲಿತಾಂಶ ಖಂಡಿತ ಎರಡೂ ತಂಡಗಳ ಮನಸ್ಸಿನಲ್ಲಿ ಇದ್ದೇ ಇರುತ್ತದೆ.
ಕಳೆದ ಏಕದಿನ ವಿಶ್ವಕಪ್ ಟೂರ್ನಿಗೆ ತಂಡಕ್ಕೆ ಮರಳಿದ್ದ ಸ್ಟೀವನ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಇದೀಗ ತಂಡದಲ್ಲಿದ್ದಾರೆ. ಇದು ಪ್ರವಾಸಿ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿದೆ. ಪಾಕಿಸ್ತಾನ ಹಾಗೂ ಶ್ರೀಲಂಕಾ ಟಿ-20 ಸರಣಿಯಿಂದ ಈ ಇಬ್ಬರೂ ಆಟಗಾರರು ಅತ್ಯುತ್ತಮ ಲಯದಲ್ಲಿದ್ದಾರೆ. ಇತ್ತೀಚೆಗೆ ವೆಸ್ಟ್ ಇಂಡೀಸ್ ಹಾಗೂ ಶ್ರೀಲಂಕಾ ತಂಡಗಳ ಎದುರು ಸೀಮಿತ ಓವರ್ ಗಳ ಮಾದರಿಯಲ್ಲಿ ಯಶಸ್ವಿಯಾಗಿರುವ ಭಾರತ ತಂಡ ಆತ್ಮವಿಶ್ವಾಸದಲ್ಲಿದೆ. ವಿಶ್ರಾಂತಿಯಿಂದ ರೋಹಿತ್ ಶರ್ಮಾ ಹಾಗೂ ಮೊಹಮ್ಮದ್ ಶಮಿ ಅವರು ಮರಳಿದ್ದರಿಂದ ಭಾರತ ತಂಡಕ್ಕೆ ಇನ್ನಷ್ಟು ಬಲ ಬಂದಂತಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos