ನಾಳೆ ಕಾರ್ಮಿಕರ ಮುಷ್ಕರವಷ್ಟೇ; ಎಲ್ಲಾ ಸೇವೆಗಳು ಲಭ್ಯವಿವೆ

  • In State
  • January 7, 2020
  • 142 Views
ನಾಳೆ ಕಾರ್ಮಿಕರ ಮುಷ್ಕರವಷ್ಟೇ; ಎಲ್ಲಾ ಸೇವೆಗಳು ಲಭ್ಯವಿವೆ

ಬೆಂಗಳೂರು, ಜ. 7: ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಾರ್ಮಿಕ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿದ್ದು, ಅದರ ವಿರುದ್ಧ ರಾಷ್ಟ್ರಾದ್ಯಂತ ಕಾರ್ಮಿಕ ಸಂಘಟನೆಗಳು ನಾಳೆ ಮುಷ್ಕರ ನಡೆಸಲು ತೀರ್ಮಾನಿಸಿದ್ದು, ದೇಶದಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ.

ಇದನ್ನು’ಭಾರತ್ ಬಂದ್’ ಎಂಬಂತೆ ಬಿಂಬಿಸಲಾಗಿದೆ, ಆದರೆ ಅಂದು ಬಂದ್ ನಡೆಯುವುದಿಲ್ಲ. ಬದಲಾಗಿ ಮುಷ್ಕರ ಮಾತ್ರ ನಡೆಯಲಿದೆ ಎಂದು ಕಾರ್ಮಿಕ ಸಂಘಟನೆಗಳು ಸ್ಪಷ್ಟಪಡಿಸಿವೆ. ಹೀಗಾಗಿ ಬಸ್, ಆಟೊ, ಟ್ಯಾಕ್ಸಿ, ಸರಕು ಸಾಗಣೆ, ಬ್ಯಾಂಕಿಂಗ್ ಸೇವೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ.  ಜೊತೆಗೆ ಶಾಲಾ – ಕಾಲೇಜುಗಳು ಸರಕಾರಿ ಕಚೇರಿಗಳು ಕೂಡಾ ಎಂದಿನಂತೆಯೇ ಕಾರ್ಯ ನಿರ್ವಹಿಸಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ದುಡಿಯುವ ಜನರ ಹಕ್ಕುಗಳನ್ನು ಸಂರಕ್ಷಿಸಿ, ಪರ್ಯಾಯ ಆರ್ಥಿಕ ನೀತಿಗಳನ್ನು ಜಾರಿಗೆ ತರಬೇಕು. ಎಲ್ಲ ಕಾರ್ಮಿಕರಿಗೆ ಕನಿಷ್ಠ 21 ಸಾವಿರ ರೂ. ವೇತನ ನಿಗದಿ ಹಾಗೂ ಗುತ್ತಿಗೆ ಪದ್ದತಿ ಹೋಗಲಾಡಿಸಿ ಖಾಯಂ ಹುದ್ದೆಗೆ ತೆಗೆದುಕೊಳ್ಳುವುದು ಸೇರಿ ಒಟ್ಟು 13 ಬೇಡಿಕೆಗಳನ್ನು ಕಾರ್ಮಿಕ ಸಂಘಟನೆಗಳು ಕೇಂದ್ರದ ಮುಂದಿಟ್ಟಿವೆ. ಆದರೆ,  ಕೇವಲ ಮುಷ್ಕರವಷ್ಟೇ ನಡೆಯಲಿದ್ದು ಬಂದ್ ಗೆ  ಕರೆ ನೀಡಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು ಎಲ್ಲೆಡೆ ಪ್ರತಿಭಟನೆಗಳನ್ನಷ್ಟೇ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕೆಎಸ್‍ ಆರ್ ಟಿಸಿ ನೌಕರರ ಸಂಘಟನೆಗಳು, ಆಟೊ, ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್ ಮತ್ತು ಸರಕು ಸಾಗಣೆ ಚಾಲಕರು ಮತ್ತು ಮಾಲೀಕರ ಸಂಘಗಳು, ಇದರೊಂದಿಗೆ ಹಲವಾರು ವಿದ್ಯಾರ್ಥಿ ಸಂಘಟನೆಗಳು ಮುಷ್ಕರಕ್ಕೆ ಬಾಹ್ಯ ಬೆಂಬಲ ನೀಡಿವೆ. ಆದರೆ, ಸೇವೆ ಸ್ಥಗಿತಗೊಳಿಸಿ, ಪ್ರತಿಭಟನೆಯಲ್ಲಿ ಭಾಗವಹಿಸುತ್ತಿಲ್ಲ. ಹಾಗಾಗಿ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ಗಳು, ಆಟೊ, ಟ್ಯಾಕ್ಸಿ, ಸರಕು ಸಾಗಣೆ ವಾಹನಗಳು ಎಂದಿನಂತೆ ಸೇವೆ ಒದಗಿಸಲಿವೆ. ಜನರು ಯಾವುದೇ ಆತಂಕ ಪಡುವಂತಿಲ್ಲ ಎಂದು ಸಂಘಟನೆಗಳು ತಿಳಿಸಿವೆ.

ಕಾರ್ಮಿಕ ಸಂಘಟನೆಗಳ ಪ್ರಮುಖ ಬೇಡಿಕೆಗಳಿವು

ಕೆಲವರು ಬಂದ್ಗೆ ಕರೆ ಕೊಟ್ಟಿರುವುದಾಗಿ ಭಾವಿಸಿದ್ದು, ಬಸ್, ಆಟೊ, ಟ್ಯಾಕ್ಸಿ, ಸರಕು ಸಾಗಣೆ ವಾಹನಗಳ ಸೇವೆ ಸ್ಥಗಿತಗೊಳಿಸುವುದಿಲ್ಲ. ಕಾರ್ಖಾನೆಗಳಲ್ಲಿ ಉತ್ಪಾದನೆ ಸ್ಥಗಿತಗೊಳ್ಳಲಿದೆ. ಉಳಿದಂತೆ ಯಾವುದೇ ಸೇವೆಗಳು ಬಂದ್ ಆಗುವುದಿಲ್ಲ. ಸಾರಿಗೆ ಸಂಸ್ಥೆ ನೌಕರರು ಅಲ್ಲಲ್ಲಿ ಧರಣಿ ನಡೆಸಲಿದ್ದಾರೆ.

– ಎಚ್.ವಿ. ಅನಂತಸುಬ್ಬರಾವ್, ಎಐಟಿಯುಸಿ ಪ್ರಧಾನ ಕಾರ್ಯದರ್ಶಿ

ಫ್ರೆಶ್ ನ್ಯೂಸ್

Latest Posts

Featured Videos