ಬಿಜೆಪಿಗೆ ಸಾರಿಗೆ ಸಚಿವ ಟಾಂಗ್!

ಬಿಜೆಪಿಗೆ ಸಾರಿಗೆ ಸಚಿವ ಟಾಂಗ್!

ಬೆಂಗಳೂರು: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ವಿಧೇಯಕ- 2024  ಅನ್ನು ನಿನ್ನೆ ರಾಜ್ಯ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದ್ದು, ಇದನ್ನು ಬಿಜೆಪಿ ಕಟುವಾಗಿ ಟೀಕಿಸಿದೆ. ವಿಧೇಯಕದಲ್ಲಿರುವ, ದೇವಾಲಯಗಳ ಆದಾಯದಲ್ಲಿ ತೆರಿಗೆ ಸಂಗ್ರಹಿಸುವ ನಿಯಮದ ಬಗ್ಗೆ ಬಿಜೆಪಿಗರು ಆಕ್ಷೇಪಿಸಿದ್ದು, ಕಾಂಗ್ರೆಸ್ ಸರ್ಕಾರವನ್ನು “ಹಿಂದೂ ವಿರೋಧಿ” ಎಂದು ಕರೆದಿದ್ದಾರೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ರಾಜ್ಯದ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ  ರಾಮಲಿಂಗಾರೆಡ್ಡಿ ಟಾಂಗ್‌ ನೀಡಿದ್ದಾರೆ.

ಕರ್ನಾಟಕ ಇಂದು ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ವಿದೇಶಿ 2024 ಮಂಡನೆಗೆ ರಾಜ್ಯ ಬಿಜೆಪಿ ಟೀಕಿಸಿದೆ. ರಾಜ್ಯದಲ್ಲಿ ಸರಣಿ ರೂಪದಲ್ಲಿ ಹಿಂದೂ  ವಿರೋಧಿ ಧೋರಣೆ ಅನುಸರಿಸುತ್ತಿರುವ ಕಾಂಗ್ರೆಸ್ ಸರ್ಕಾರ ಇದೀಗ ತನ್ನ ಬರಿದಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ಹಿಂದೂ ದೇವಾಲಯಗಳ ಆದಾಯದ ಮೇಲು ವಕ್ರ ದೃಷ್ಟಿ ಬೀರಿದೆ.

ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮದಾಯದತ್ತಿಗಳ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆದುಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟಿಕ್ಕಿಸಿದರು. ಇದಕ್ಕೆ ತಿರುಗೇಟು ನೀಡಿದ ಸಚಿವ ರಾಮಲಿಂಗ ರೆಡ್ಡಿ ನೀವು ರಾಜಕೀಯ ಲಾಭಕ್ಕಾಗಿ ಕೇವಲ ಇಂದು ವಿರೋಧಿ ಧೋರಣೆ ಎಂದು ನಮ್ಮ ಸರ್ಕಾರವನ್ನು ದೂರುತ್ತಿದ್ದೀರಿ.

ಒರಿಜಿನಲ್ ಹಿಂದೂಗಳು ನಾವು ಇಷ್ಟು ವರ್ಷ ದೇವಾಲಯಗಳನ್ನು ಹಿಂದುಗಳನ್ನು ಕಾಪಾಡಿಕೊಂಡು ಬಂದಿದ್ದು ಕಾಂಗ್ರೆಸ್ ಸರ್ಕಾರವೇ ನಮ್ಮ ಸರ್ಕಾರವು ಯಾವ ಧರ್ಮದ ಮೇಲು ವಕ್ರದೃಷ್ಟಿ ಬೀರುವುದಿಲ್ಲ.

ಎಲ್ಲರೂ ಒಂದಾಗಿ ಒಗ್ಗಟ್ಟಾಗಿ ಬಾಳುವುದೇ ನಮ್ಮ ಕಾಂಗ್ರೆಸ್ ಸರ್ಕಾರದ ಗುರಿ ಸರ್ವ ಜನಾಂಗ ಶಾಂತಿಯ ತೋಟ ಕರ್ನಾಟಕ. ನೀವು ಹೇಳುತ್ತಿರುವುದು ಬೊಕ್ಕಸ ತುಂಬಿಸಿಕೊಳ್ಳಲು ಇಂದು ದೇವಾಲಯಗಳ ಆದಾಯದ ಮೇಲೆ ವಕ್ರದೃಷ್ಟಿ ಕಾಂಗ್ರೆಸ್ ಸರ್ಕಾರ ವರೆಗೂ ನಿಮ್ಮ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದು ಆಗ ಕೂಡ ಈ ವಿಧೇಯಕ ಅನುಷ್ಠಾನದಲ್ಲಿತ್ತು.

ಯಾವ ಧರ್ಮದ ಆದಾಯದ ಮೇಲು ನಮ್ಮ ಕಾಂಗ್ರೆಸ್ ಸರ್ಕಾರ ಕಣ್ಣು ಬೀಳುವುದಿಲ್ಲ ಎಲ್ಲರೂ ಒಗ್ಗಟ್ಟಾಗಿ ಸಂತೋಷದಿಂದ ಬಾಳುವುದೇ ಕಾಂಗ್ರೆಸ್ ಸರ್ಕಾರದ ಗುರಿ. ನೀವು ಎರಡು ಬಾರಿ ಆಡಳಿತದಲ್ಲಿದ್ದಾಗಲ್ಲ ಆಗ ಕೂಡ ಭಕ್ತರ ಹಣದಲ್ಲಿ ಬಿಜೆಪಿ ಸರ್ಕಾರ ಪಾಲು ಕಸಿಯುವ ಕೆಲಸ ಮಾಡಿದ್ದ ನಿಮ್ಮ ಸುಳ್ಳು ಮೋಸದ ಪ್ರಚಾರವನ್ನು ರಾಜ್ಯದ ಜನತೆ ನಂಬುವುದಿಲ್ಲ ಎಂದು ಸಚಿವ ರಾಮಲಿಂಗ ರೆಡ್ಡಿ ಟಾಂಗ್ ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos