ಏಪ್ರಿಲ್ 26ಕ್ಕೆ ಮೈಸೂರಿನ ಪ್ರವಾಸಿ ತಾಣಗಳು ಬಂದ್

ಏಪ್ರಿಲ್ 26ಕ್ಕೆ ಮೈಸೂರಿನ ಪ್ರವಾಸಿ ತಾಣಗಳು ಬಂದ್

ಮೈಸೂರು: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳನ್ನು ಬಂದ್ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಮತದಾನದ ಪ್ರಮಾಣ ಹೆಚ್ಚಿಸಲು ಅಧಿಕಾರಿಗಳು ಈ ನಿರ್ಧಾರಕ್ಕೆ ಮುಂದಾಗಿದ್ದಾರೆ. ಏಪ್ರಿಲ್ 26ರಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಕ್ಷೇತ್ರ ವ್ಯಾಪ್ತಿಯ ಮೈಸೂರು ಮೃಗಾಲಯ, ಕಾರಂಜಿ ಕೆರೆ ಸೇರಿದಂತೆ ಇತರ ಪ್ರವಾಸಿ ತಾಣಗಳನ್ನು ಮುಚ್ಚಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಏಪ್ರಿಲ್ 26 ರಂದು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತದಾನದ ದಿನ ಶುಕ್ರವಾರ ಬಂದ ಹಿನ್ನೆಲೆಯಲ್ಲಿ ಅನೇಕರು ವಾರಾಂತ್ಯಕ್ಕೆ ಮೈಸೂರಿಗೆ ಪ್ರವಾಸಕ್ಕೆ ಪ್ಲಾನ್ ರಚಿಸಲಿದ್ದಾರೆ. ಶನಿವಾರ, ಭಾನುವಾರ ರಜೆ ಇರುವ ಕಾರಣ ಮತದಾನ ಮಾಡದೇ ಟ್ರಿಪ್‌ಗಳಿಗೆ ತೆರಳುವವರ ಸಂಖ್ಯೆ ಹೆಚ್ಚಿದೆ. ಹೀಗಾಗಿ ಮತದಾನದ ಪ್ರಮಾಣ ಹೆಚ್ಚಿಸುವ ಸಲುವಾಗಿ ಅಧಿಕಾರಿಗಳು ಪ್ರವಾಸಿ ತಾಣಗಳನ್ನು ಬಂದ್‌ ಮಾಡಲು ಮುಂದಾಗಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos