ರಾಜ್ಯಾದ್ಯಂತ ರೈಲು ಬಂದ್

ರಾಜ್ಯಾದ್ಯಂತ ರೈಲು ಬಂದ್

ಚಾಮರಾಜನಗರ: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ರಾಜ್ಯಾದ್ಯಂತ ೨೦೨೧ ರ ಜನವರಿ ೯ ರಂದು ರೈಲು ಬಂದ್ ಚಳುವಳಿ ನಡೆಸಲಾಗುವುದು ಎಂದು ಕನ್ನಡ ಚಳವಳಿ ಹೋರಾಟಗಾರ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜು ಜಿಲ್ಲಾಡಳಿತ ಭವನದ ಮುಂದೆ ತಮ್ಮ ಬೆಂಬಲಿಗರೊಂದಿಗೆ ರಾಜ್ಯ ಸರ್ಕಾರದ ವಿರುದ್ದ ದಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಮುಂದಿನ ತಿಂಗಳು ಎರಡನೇ ಹಂತದ ಚಳವಳಿ ಆರಂಭಿಸಲಾಗುತ್ತಿದ್ದು ಜನವರಿ ೯ ರಂದು ರಾಜ್ಯಾದ್ಯಂತ ರೈಲು ತಡೆ ಚಳವಳಿ ನಡೆಸಲಾಗುವುದು, ರಾಜ್ಯದ ಎಲ್ಲಾ ರೈಲು ನಿಲ್ದಾಣಗಳಲ್ಲಿ ಹಾಗು ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರಗಳಲ್ಲಿ ಹಾದು ಹೋಗಿರುವ ರೈಲು ಹಳಿಗಳ ಮೇಲೆ ಕುಳಿತು ಸತ್ಯಾಗ್ರಹ ನಡೆಸಿ ರೈಲು ತಡೆ ನಡೆಸಲಾಗುವುದು ಎಂದರು.
ರಾಜ್ಯಾದ್ಯಂತ ಈಗಾಗಲೇ ಎರಡು ಸಾವಿರ ಕನ್ನಡಪರ ಸಂಘಟನೆಗಳು ಈ ಪ್ರತಿಭಟನೆಗೆ ಬೆಂಬಲ ನೀಡುತ್ತಿವೆ ಎಂದು ತಿಳಿಸಿದ್ದಾರೆ. ಅಂದು ಪ್ರಯಾಣಿಕರು ರೈಲು ನಿಲ್ದಾಣದ ಕಡೆ ಬರಬಾರದು ಎಂದು ಅವರು ಮನವಿ ಮಾಡಿದರು. ಇದು ಕನ್ನಡಿಗರ ಉಳಿವಿನ ಪ್ರಶ್ನೆಯಾಗಿದ್ದು, ನಮ್ಮ ಹೋರಾಟ ಯಾವುದೇ ಕಾರಣಕ್ಕು ನಿಲ್ಲುವುದಿಲ್ಲ ಎಂದು ವಾಟಾಳ್ ಹೇಳಿದರು
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಹೊರನಾಡು ಗೊತ್ತಿಲ್ಲ. ಗಡಿನಾಡು ಗೊತ್ತಿಲ್ಲ. ಸಾಂಸ್ಕೃತಿಕವಾದ ಚಿಂತನೆ ಇಲ್ಲ. ಬಹುಸಂಖ್ಯಾತರಿದ್ದಾರೆ ಎಂದು ನಿಗಮ ಮಾಡಲು ಹೊರಟಿದ್ದಾರೆ. ನಾಳೆ ತಮಿಳರು, ಮಾರ್ವಾಡಿಗಳಿಗೂ ಕೊಡಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos