ರೈಲು ಡಿಕ್ಕಿ ಹೊಡೆದು ಮೂವರು ಸಾವು

ರೈಲು ಡಿಕ್ಕಿ ಹೊಡೆದು ಮೂವರು ಸಾವು

ಬೆಂಗಳೂರು: ಯಶವಂಶಪುರ-ಕಣ್ಣೂರು ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಮೂವರು ಸಾವನ್ನಪ್ಪಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಆಂಧ್ರದ ಚಿತ್ತೂರಿನ ಶಶಿಕುಮಾರ್, ಲೊಕೇಶ್ ಹಾಗೂ ಮತ್ತೋರ್ವ ವ್ಯಕ್ತಿ ಮೃತರೆಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ರೈಲ್ವೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು.

ಮೃತಪಟ್ಟ ಯುವಕರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರಾ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos