ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಫೌಜಿಯಾ ತರನಂ.ಬಿ, ಶಿವಾನಂದ ಕಪಾಸಿ ಹಾಗೂ ನಾಗೇಂದ್ರ ಪ್ರಸಾದ್.ಕೆ ಅವರನ್ನು ವರ್ಗಾವಣೆ ಮಾಡಲಾಗಿದೆ.

ತೋಟಗಾರಿಕೆ ಇಲಾಖೆಯ ನಿರ್ದೇಶಕರಾಗಿದ್ದ ಫೌಜಿಯ ತರುನಂ ಅವರನ್ನು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ, ಕರ್ನಾಟಕ ಅದಿರು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿವಾನಂದ ಕಪಾಸಿ ಅವರನ್ನು ಆಹಾರ ಮತ್ತು ನಾಗರಿಕ ಪೂರೈಕೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಹಾಗೂ ನಾಗೇಂದ್ರ ಪ್ರಸಾದ್ ಅವರನ್ನು ರಿಯಲ್‌ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.

ಜೊತೆಗೆ ಅವರಿಗೆ ಹೆಚ್ಚುವರಿಯಾಗಿ ತೋಟಗಾರಿಕೆ ಇಲಾಖೆಯ ನಿರ್ದೇಶಕ ಸ್ಥಾನದಲ್ಲಿ ಮುಂದುವರೆಯುವAತೆ ಸೂಚಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos