ತ್ರಿಪುರ ಚುನಾವಣೆಯನ್ನು ಮುಂದೂಡಿದ ಚುನಾವಣಾ ಆಯೋಗ

ತ್ರಿಪುರ ಚುನಾವಣೆಯನ್ನು ಮುಂದೂಡಿದ ಚುನಾವಣಾ ಆಯೋಗ

ನವದೆಹಲಿ, ಏ. 17, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಯಲ್ಲಿ ಈಶಾನ್ಯ ರಾಜ್ಯವಾದ ತ್ರಿಪುರದಲ್ಲಿ ಚುನಾವಣೆ ದಿನಾಂಕವನ್ನು ಏ. 18 ರಿಂದ 23 ಕ್ಕೆ ಮುಂದೂಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ತ್ರಿಪುರದಲ್ಲಿ ಕಾನೂನು, ಸುವ್ಯವಸ್ಥೆಯನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಗದಿರುವ ಕಾರಣ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಆಯೋಗ ತಿಳಿಸಿದೆ.

ಈ ರಾಜ್ಯದಲ್ಲಿ 2 ಲೋಕಸಭಾ ಕ್ಷೇತ್ರಗಳಿದ್ದು, ತ್ರಿಪುರ ಪಶ್ಚಿಮ ಕ್ಷೇತ್ರದಲ್ಲಿ ಈಗಾಗಲೇ ಚುನಾವಣೆ ನಡೆದಿದೆ. ಏ. 11 ರಂದು ಅಲ್ಲಿ ಚುನಾವಣೆ ನಡೆದಿತ್ತು. ಇದೀಗ ಏ. 18 ರಂದು ತ್ರಿಪುರ ಪೂರ್ವ ಕ್ಷೇತ್ರದಲ್ಲಿ ಚುನಾವಣೆ ನಡೆಯಬೇಕಿತ್ತು. ಆದರೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಇದರಿಂದ ಪಾರದರ್ಶಕವಾಗಿ, ನಿರ್ಭಯವಾಗಿ ಮತದಾನ ನಡೆಸಲು ಸಾಧ್ಯವಾಗದಿರಬಹುದಾದ ಕಾರಣ ಚುನಾವಣೆಯನ್ನು ಮುಂದೂಡಲಾಗುತ್ತಿದೆ ಎಂದು ಆಯೋಗ ತಿಳಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos