ನವದೆಹಲಿ, ಸೆ. 3: ಮಾಜಿ ಸಚಿವ, ಕಾಂಗ್ರೆಸ್ ಪ್ರಬಲ ನಾಯಕ ಡಿ.ಕೆ.ಶಿವಕುಮಾರ್ ಅವರನ್ನ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಸಂಜೆ ಬಂಧಿಸಿದ್ದಾರೆ. ದೆಹಲಿಯ ನಿವಾಸದಲ್ಲಿ ಪತ್ತೆಯಾದ 8.6 ಕೋಟಿ ಪ್ರಕರಣದ ಕೂರಿತು ಕಳೆದ 4 ದಿನಗಳಿಂದ ನವದೆಹಲಿಯ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಅವರು ವಿಚಾರಣೆಗೆ ಹಾಜರಾಗಿದ್ದರು. ಆದರೆ, ವಿಚಾರಣೆಗೆ ಡಿಕೆಶಿ ಸರಿಯಾಗಿ ಸಹಕರಿಸಿಲ್ಲ ಎಂಬ ಕಾರಣ ನೀಡಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಇ.ಡಿ. ಕಚೇರಿ ಮುಂದೆ ಡಿಕೆಶಿ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರ ಜಮಾಯಿಸುತ್ತಿರುವುದರಿಂದ ಕಚೇರಿಗೆ ಹೆಚ್ಚುವರಿ ಭದ್ರತೆಯನ್ನು ಒದಗಿಸಲಾಗಿದೆ.
ಡಿಕೆಶಿ ಅವರನ್ನು ಇ.ಡಿ. ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಅಥವಾ ನ್ಯಾಯಾಧೀಶರ ಮನೆಯಲ್ಲಿ ಹಾಜರುಪಡಿಸಲಿದೆ. ಇಂದು ಕೋರ್ಟ್ ಸಮಯ ಮುಗಿದಿರುವುದರಿಂದೆ. ನಾಳೆ ಡಿಕೆಶಿ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.