ಟಿ.ಎಸ್.ನಾಗಾಭರಣರಿಗೆ ಶ್ರೀ ಶಿವಕುಮಾರ ಪ್ರಶಸ್ತಿ

ಟಿ.ಎಸ್.ನಾಗಾಭರಣರಿಗೆ ಶ್ರೀ ಶಿವಕುಮಾರ ಪ್ರಶಸ್ತಿ

ಚಿತ್ರದುರ್ಗ, ಅ.18 : ಕಳೆದ 15 ವರ್ಷಗಳಿಂದ ರಂಗಭೂಮಿಯಲ್ಲಿ ಸೇವೆ ಸಲ್ಲಿಸಿದವರಿಗೆ ನೀಡುತ್ತಿರುವ ಪ್ರಶಸ್ತಿಗೆ ಈ ವರ್ಷ ನಾಗಾಭರಣ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಾಣೇಹಳ್ಳಿ ಮಠದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.
ಸಾಣೇಹಳ್ಳಿ ತರಳಬಾಳು ಶಾಖಾ ಮಠದ ಶ್ರೀ ಶಿವಕುಮಾರ ಕಲಾಸಂಘದಿಂದ ನೀಡುವ ಪ್ರತಿಷ್ಠಿತ ಶ್ರೀ ಶಿವಕುಮಾರ ಪ್ರಶಸ್ತಿಗೆ ನಟ, ನಿರ್ದೇಶಕ ಟಿ.ಎಸ್. ನಾಗಾಭರಣ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ 50 ಸಾವಿರ ನಗದು ಹಾಗೂ ಫಲಕಗಳನ್ನು ಒಳಗೊಂಡಿರುತ್ತದೆ.
ನವೆಂಬರ್ 2 ರಿಂದ 7 ರವರೆಗೆ ಸಾಣೇಹಳ್ಳಿಯಲ್ಲಿ ನಡೆಯುವ ರಾಷ್ಟ್ರೀಯ ನಾಟಕೋತ್ಸವದಲ್ಲಿ ನ. 7 ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಫ್ರೆಶ್ ನ್ಯೂಸ್

Latest Posts

Featured Videos