ತುಮಕೂರು: ಸಿದ್ದಗಂಗಾ ಶ್ರೀಗಳ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ

ತುಮಕೂರು: ಸಿದ್ದಗಂಗಾ ಶ್ರೀಗಳ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ

ತುಮಕೂರು, ಜ. 21: ತ್ರಿವಿಧ ದಾಸೋಹಿ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆಜಿ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ.

ಇಂದು ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೆ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ದಗಂಗಾ ಸ್ವಾಮೀಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಗದ್ದುಗೆಗೆ ಮೆರವಣಿಗೆ ತಲುಪಿದೆ.

ದೆಹಲಿ ಮೂಲದ ಉದ್ಯಮಿ ಮುಕೇಶ್ ಗರ್ಗ್ ಭಕ್ತಿ ಪೂರ್ವಕವಾಗಿ ಈ ಬೆಳ್ಳಿ ವಿಗ್ರಹವನ್ನು ಸಮರ್ಪಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos