ಬೆಂಗಳೂರು, ಅ. 15 : ಯಶ್ ರಾಧಿಕಾ ಪಂಡಿತ್ 2ನೇ ಮಗುವಿಗೆ ಜನ್ಮ ನೀಡುವ ನಿರೀಕ್ಷೆಯಲ್ಲಿದ್ದಾರೆ. ಯಶ್ ಮಗಳಿಗೆ ಈಗ 10 ತಿಂಗಳಾಗಿದ್ದು, ಶೀಘ್ರದಲ್ಲೇ ರಾಧಿಕಾ ಮತ್ತೊಂದು ಮಗುವಿಗೆ ಜನ್ಮ ನೀಡಲಿದ್ದಾರೆ. ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು, ಅವರು ಸೀಮಂತ ಮಾಡಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಿಂಡ್ರೆಲ್ಲಾರಂತೆ ಮಿಂಚಿದ್ದಾರೆ. ರಾಧಿಕಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಫೋಟೋವೊಂದನ್ನು ಹಂಚಿಕೊಂಡು, “ನನ್ನ ಆತ್ಮೀಯ ಸ್ನೇಹಿತರು ನನಗೆ ನೀಡಿದ ಅದ್ಭುತ. ಸೀಮಂತ ಕಾರ್ಯಕ್ರಮದ ಫೋಟೋಗಳು ಹಾಗೂ ವಿವರಗಳು ಶೀಘ್ರದಲ್ಲೇ ಬರಲಿದೆ” ಎಂದು ಬರೆದು ಪೋಸ್ಟ್ ಮಾಡಿದ್ದಾರೆ.
ರಾಧಿಕಾ ಹಳದಿ ಬಣ್ಣದ ಗೌನ್ ಧರಿಸಿ ಕೈಯಲ್ಲಿ ಬಿಳಿ ಬಣ್ಣದ ಗುಲಾಬಿ ಹೂ ಹಿಡಿದು ಪೋಸ್ ನೀಡಿದ್ದಾರೆ. ಅಭಿಮಾನಿಗಳು ಬ್ಯೂಟಿಫುಲ್, ಸೂಪರ್ ಮಮ್ಮಿ ಎಂದು ಕಮೆಂಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.