ಕರಾವಳಿಯಲ್ಲಿ ಇನ್ನೆರಡು ದಿನ ಮಳೆ

ಕರಾವಳಿಯಲ್ಲಿ ಇನ್ನೆರಡು ದಿನ ಮಳೆ

ಮಂಗಳೂರು, ಡಿ. 2 : ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಮತ್ತು ಕೊಡಗು ಜಿಲ್ಲೆಗಳ ಹೆಚ್ಚಿನ ಕಡೆಗಳಲ್ಲಿ ಶನಿವಾರ ಮಧ್ಯಾಹ್ನದ ಬಳಿಕ ಅನಿರೀಕ್ಷಿತ ಉತ್ತಮ ಮಳೆಯಾಗಿದೆ. ಏಕಾಏಕಿ ಸುರಿದ ಮಳೆಯಿಂದಾಗಿ ಜನಜೀವನಕ್ಕೆ ತೊಂದರೆಯಾಯಿತು.
ಮಂಗಳೂರಿನಲ್ಲಿ ಸಂಜೆ ವೇಳೆಗೆ ನಿರಂತರ ಮಳೆ ಸುರಿಯಿತು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಉತ್ಸವದ ಸಂದರ್ಭ ಮಳೆಯಿಂದಾಗಿ ಭಕ್ತರಿಗೆ ಸ್ವಲ್ಪ ತೊಂದರೆಯಾಯಿತು. ಕಟೀಲು, ಕಿನ್ನಿಗೋಳಿಯಲ್ಲಿ ಉತ್ತಮ ಮಳೆಯಾಗಿದೆ. ಮೂಲ್ಕಿ, ವೇಣೂರಿನಲ್ಲಿಯೂ ಮಳೆ ಬಂದಿದೆ. ವಿಟ್ಲ, ಬಂಟ್ವಾಳ, ಸುರತ್ಕಲ್ನಲ್ಲಿ ಸಾಧಾರಣ ಮಳೆಯಾಗಿದೆ. ಸುಳ್ಯ ತಾಲೂಕಿನ ಕೆಲವೆಡೆ ಗುಡುಗು ಸಹಿತ ವರ್ಷಧಾರೆಯಾಗಿದೆ. ಹಳೆಯಂಗಡಿ, ಕಡಬ, ಪುತ್ತೂರಿನಲ್ಲಿ ಹನಿ ಮಳೆಯಾಗಿದೆ.ಉಡುಪಿ ಜಿಲ್ಲೆಯ ಕಾರ್ಕಳ ಪರಿಸರದಲ್ಲಿ ಉತ್ತಮ ಮಳೆಯಾದರೆ ಉಡುಪಿ, ಕುಂದಾಪುರ, ತೆಕ್ಕಟ್ಟೆ, ಕೋಟ, ಕೋಟೇಶ್ವರ ಮೊದಲಾದೆಡೆ ಸಾಧಾರಣ ಮಳೆಯಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos