ಆಂಧ್ರಪ್ರದೇಶ ಎರಡು ರೈಲುಗಳ ಮಧ್ಯೆ ದುರಂತ.

ಆಂಧ್ರಪ್ರದೇಶ ಎರಡು ರೈಲುಗಳ ಮಧ್ಯೆ ದುರಂತ.

ವಿಶಾಖಪಟ್ಟಣ: ಇತ್ತೀಚಿನ ದಿನಗಳಲ್ಲಿ ಅಪಘಾತಗಳು ಹೆಚ್ಚಾಗುತ್ತಿದು. ಆಂಧ್ರಪ್ರದೇಶ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ ಆಗಿದೆ. 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಆಂಧ್ರಪ್ರದೇಶದ ವಿಜಿನಗರಮ್ ಜಿಲ್ಲೆಯ ಸಮೀಪ ಹೌರಾ-ಚೆನ್ನೈ ಮಾರ್ಗದಲ್ಲಿ ನಿನ್ನೆ ಸಂಜೆ ವೇಳೆಗೆ ಎರಡು ಪ್ರಯಾಣಿಕ ರೈಲುಗಳ ಮಧ್ಯೆ ಈ ದುರಂತ ಸಂಭವಿಸಿತ್ತು.

ಈ ರೈಲು ಅಪಘಾತದಿಂದಾಗಿ 18 ರೈಲುಗಳ ಪ್ರಯಾಣವನ್ನು ರದ್ದು ಮಾಡಲಾಗಿದ್ದು, 22ಕ್ಕೂ ಹೆಚ್ಚು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ವಿಶಾಖಪಟ್ಟಣಂ ಮತ್ತು ಪಲಾಸ ನಡುವಿನ ವಿಶೇಷ ಪ್ಯಾಸೆಂಜರ್ ರೈಲು ಸಿಗ್ನಲ್ ಇಲ್ಲದ ಕಾರಣ ಅಳಮಂಡ ಮತ್ತು ಕಂಟಕಪಲ್ಲಿ ನಡುವೆ ಹಳಿಗಳ ಮೇಲೆ ನಿಂತಿದ್ದಾಗ ವೈಜಾಗ್-ರಾಯಗಡ ಪ್ಯಾಸೆಂಜರ್ ರೈಲು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೋಗಿಗಳು ಹಳಿತಪ್ಪಿ ದುರಂತ ಸಂಭವಿಸಿದೆ.

ಸಿಗ್ನಲಿಂಗ್ ಅನ್ನು ಲೋಕೋ ಪೈಲಟ್ ಗಮನಿಸಲಿಲ್ಲ. ಮಾನವ ದೋಷದಿಂದಲೇ ಈ ದುರಂತ ಸಂಭವಿಸಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ದುರಂತದಲ್ಲಿ 13 ಜನ ಸಾವಿಗೀಡಾಗಿರುವುದನ್ನು ವಿಜಿನಗರಮ್ ಜಿಲ್ಲಾಧಿಕಾರಿ ನಾಗಲಕ್ಷ್ಮಿ ಖಚಿತಪಡಿಸಿದ್ದಾರೆ.

ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ 10 ಲಕ್ಷ ರೂ ಪರಿಹಾರವನ್ನು ಘೋಷಿಸಲಾಗಿದೆ. ಹಾಗೆಯೇ ಘಟನೆಯಲ್ಲಿ ಗಂಬೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ. ಹಾಗೆಯೇ ಸಣ್ಣಪುಟ್ಟ ಗಾಯಾಳುಗಳಿಗೆ 50 ಸಾವಿರ ರೂ ಪರಿಹಾರ ಘೋಷಿಸಲಾಗಿದೆ ಎಂದು ರೈಲ್ವೆ ಸಚಿವರು ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos