ತಾಯಿ ಆಶೀರ್ವಾದ ಪಡೆದ ಮೋದಿ

ತಾಯಿ ಆಶೀರ್ವಾದ ಪಡೆದ ಮೋದಿ

ಅಹಮದಾಬಾದ್, ಏ. 23, ನ್ಯೂಸ್ ಎಕ್ಸ್ ಪ್ರೆಸ್: ಇಂದು ಲೋಕಸಭಾ ಚುನಾವಣೆಗೆ ದೇಶಾದ್ಯಂತ 3ನೇ ಹಂತದ ಮತದಾನ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಇಂದು ಅಹಮದಾಬಾದ್ ನಲ್ಲಿ ಮತಚಲಾವಣೆ ಮಾಡಿದ್ದಾರೆ. ಈ ಹಿನ್ನೆಲೆ ಅವರು ಈಗಾಗಲೇ ಅಹಮದಾಬಾದ್ ನ ತಮ್ಮ ತಾಯಿಯ ನಿವಾಸಕ್ಕೆ ಆಗಮಿಸಿದ್ದಾರೆ. ಮತದಾನಕ್ಕೂ ಮುನ್ನ ಮೋದಿ, ತಮ್ಮ ತಾಯಿ ಹೀರಾಬೆನ್ ಮೋದಿ ಅವರಿಂದ ಆಶೀರ್ವಾದ ಪಡೆದರು.

ಮೋದಿ ಆಗಮನದ ಹಿನ್ನೆಲೆ ಈಗಾಗಲೇ ಮತಗಟ್ಟೆ ಬಳಿ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ, ಗಾಂಧಿನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಮಿತ್ ಶಾ ಕೂಡ ಮತಗಟ್ಟೆ ಬಳಿ ಕಾಯುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos