ಉಡುಪಿಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ

  • In State
  • March 5, 2019
  • 865 Views
ಉಡುಪಿಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ

ಮಾ. 5, ನ್ಯೂಸ್ ಎಕ್ಸ್ ಪ್ರೆಸ್,ಉಡುಪಿ : ಮಹಿಳೆಯ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಜಪ್ತಿ ಎಂಬಲ್ಲಿ ಈ ಘಟನೆ ನಡೆದಿದೆ.ಇಲ್ಲಿಯ ಹುಣ್ಸೆಕಟ್ಟೆ ನಿವಾಸಿ ಮನೆಯಿಂದ ಹಾಲು ತೆಗೆದುಕೊಂಡು ಹೋಗುತ್ತಿದ್ದಾಗ ಸಮೀಪದ ಕಾಡಿನಿಂದ ಹಾರಿದ ಚಿರತೆ ಮಹಿಳೆ ಮೇಲೆ ದಾಳಿ ನಡೆಸಿದೆ. ದಾಳಿಗೆ ಒಳಗಾದ ಮಹಿಳೆಯ ದೇಹದಮೇಲೆಲ್ಲ ಗಾಯಗಳಾಗಿವೆ. ಕೂಡಲೇ ಸ್ಥಳೀಯರು ಗಾಯಗೊಂಡ ಮಹಿಳೆಗೆ ಪ್ರಥಮ ಚಿಕಿತ್ಸೆ ಕೊಡಿಸಿ ಮತ್ತೆ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಕುಂದಾಪುರದ ಜಪ್ತಿ ಭಾಗದಲ್ಲಿ ಚಿರತೆ ಓಡಾಟ ಇದೇ ಎನ್ನುವುದು ಮೊದಲು ತಿಳಿದು ಬಂದಿತ್ತು. ಸದ್ಯ ಚಿರತೆ ದಾಳಿ ಮಾಡಿದ ಪ್ರದೇಶಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos