ಯುಗಾದಿ ಹಬ್ಬಕ್ಕೆ ಗ್ರಾಹಕರಿಗೆ ಶಾಕ್​

ಯುಗಾದಿ ಹಬ್ಬಕ್ಕೆ ಗ್ರಾಹಕರಿಗೆ ಶಾಕ್​

ಬೆಂಗಳೂರು: ಯುಗಾದಿ ಹಬ್ಬದ ಸಂಭ್ರಮಕ್ಕೆ ಹೂವು, ಹಣ್ಣು ಮತ್ತು ತರಕಾರಿಗಳ ಬೆಲೆ ಹೆಚ್ಚಿದಿದೆ. ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಯುಗಾದಿ ಹಬ್ಬದ ವ್ಯಾಪಾರ ವಹಿವಾಟು ಜೋರಾಗಿದ್ದು, ಬೇವು ಬೆಲ್ಲದ ಹಬ್ಬಕ್ಕೆ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಹಿಂದೂಗಳ ಹೊಸ ವರ್ಷ ಯುಗಾದಿ ಹಬ್ಬಕ್ಕೆ ಮೂರು ದಿನವಿದ್ದು, ಹಬ್ಬದ ಸಿದ್ಧತೆ ಜೋರಾಗಿದೆ. ಮಾರುಕಟ್ಟೆಗಳಲ್ಲಿ ಹೂವು ಮತ್ತು ಹಣ್ಣುಗಳ ದರ ಗಗನಕ್ಕೇರಿದೆ. ಒಂದು ವಾರದ ಹಿಂದೆ ಇದ್ದ ಬೆಲೆಗಿಂತ ಇದೀಗ ಹೂವು ಮತ್ತು ಹಣ್ಣುಗಳ ದರ ದುಪಟ್ಟಾಗಿದೆ.

ನಾಳೆ ಯುಗಾದಿ, ಹಿಂದೂ ಪಂಚಾಂಗದ ಪ್ರಕಾರ ಹೊಸವರ್ಷ. ಹೀಗಾಗಿ ಯುಗಾದಿ ಪ್ರತಿವರ್ಷ ಬಹಳ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಖರೀದಿ ಭರಾಟೆ ಜೋರಾಗಿರುತ್ತದೆ. ಆದರೆ ಈ ವರ್ಷ ಮಾರಕಟ್ಟೆಯಲ್ಲಿ ಹೇಳಿಕೊಳ್ಳುವಷ್ಟು ಜನರಿಲ್ಲ. ಬಿಸಿಲಿಗೆ ಹೆದರಿ ಜನರು ಮಾರುಕಟ್ಟೆಗಳಿಗೆ ಬರಲು ಹಿಂದೇಟು ಹಾಕುತ್ತಿರುವುದು ಒಂದು ಕಡೆಯಾದರೆ, ಬರಗಾಲದಿಂದ ನೀರಿಲ್ಲದೆ ಹಣ್ಣು, ಹೂವು, ತರಕಾರಿ ಬೆಳೆ ಕಡಿಮೆಯಾಗಿದೆ. ಇದರಿಂದ ಹೂವು, ಹಣ್ಣು ಮತ್ತು ತರಕಾರಿ ಬೆಲೆ ಗಗನಕ್ಕೆ ಏರಿದೆ. ಈ ಕಾರಣದಿಂದ ಜನರು ಮಾರುಕಟ್ಟೆಯತ್ತ ಮುಖ ಮಾಡುತ್ತಿಲ್ಲ.

ಎರಡು ವಾರಗಳ ಮಾರುಕಟ್ಟೆಯಲ್ಲಿ ಕೆಜಿ ಬೀನ್ಸ್​ಗೆ 50 ರಿಂದ 60 ರೂ. ಇತ್ತು. ಇದೀಗ ಬೀನ್ಸ್ ಬೆಲೆ 70 ರೂ.ಗೆ ಏರಿಕೆಯಾಗಿದೆ. 40 ರಿಂದ 50 ರೂ. ವರೆಗೆ ಮಾರಾಟವಾಗುತ್ತಿದ್ದ ಕ್ಯಾರೆಟ್ 60 ರೂ. ಕ್ಕೆ ಮಾರಾಟವಾಗುತ್ತಿದೆ. ಇತರೆ ತರಕಾರಿಗಳಾದ ಕ್ಯಾಪ್ಸಿಕಂ, ಬದನೆ, ಟೊಮೇಟೊ ಬೆಲೆ ಕೆಜಿಗೆ 10 ರೂ. ಏರಿಕೆಯಾಗಿದೆ. ಹಾಗಿದ್ದರೆ ಕೆಆರ್ ಮಾರುಕಟ್ಟೆಯಲ್ಲಿ ತರಕಾರಿ, ಹೂವು ಮತ್ತು ಹಣ್ಣಿನ ಬೆಲೆ ಹೀಗಿದೆ..

 

ಫ್ರೆಶ್ ನ್ಯೂಸ್

Latest Posts

Featured Videos