ಕಲಬುರಗಿ, ಮಾ.5, ನ್ಯೂಸ್ ಎಕ್ಸ್ ಪ್ರೆಸ್: ಕಾಂಗ್ರೆಸ್ಗೆ ಅಧಿಕೃತವಾಗಿ ರಾಜೀನಾಮೆ ನೀಡಿರುವ ಚಿಂಚೋಳಿ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ನಾಳೆ ಪ್ರಧಾನಿ ಮೋದಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದೇನೆಂದು ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಇಂದು ಸ್ವತಃ ಉಮೇಶ್ ಜಾದವ್ ಅವರೇ ಸುದ್ದಿಗಾರರೊಂದಿಗೆ ಮಾತನಾಡಿ, ನಾಳೆ ನಡೆಯಲಿರುವ ಬಿಜೆಪಿಯ ಬೃಹತ್ ಸಮಾವೇಶದಲ್ಲಿ ಮೋದಿ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗುವುದು ನಿಶ್ಚಿತ ಎಂದಿದ್ದಾರೆ.
ಯಾರೇನೇ ಮಾಡಿದರೂ ಏನು ಆಗುವುದಿಲ್ಲ. ಸ್ಪೀಕರ್ ಪ್ರಾಮಾಣಿಕರು, ರಾಜೀನಾಮೆ ಅಂಗೀಕಾರ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸಲೇ ಎಂಬ ಪ್ರಶ್ನೆಗೆ ಉತ್ತರಿಸಿದರ ಅವರು, ಹೌದು ಮತ್ತೇಕ್ಕೆ ರಾಜೀನಾಮೆ ನೀಡಲಿ ಎಂದು ಗುಡುಗಿದರು.