ಉದ್ಯಾನವನ ಉದ್ಘಾಟಿಸಿದ ಕೇಂದ್ರ ಸಚಿವ

ಉದ್ಯಾನವನ ಉದ್ಘಾಟಿಸಿದ ಕೇಂದ್ರ ಸಚಿವ

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ನಾಗಪುರ ವಾರ್ಡ್ ವ್ಯಾಪ್ತಿಯಲ್ಲಿ ಬರುವ ರಾಜಾಜಿನಗರ ಆರ್ ಮತ್ತು ಎನ್ ಬ್ಲಾಕ್ ನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಮುಖ್ಯ ಮಂತ್ರಿಗಳ ನವನಗರೊತ್ತಾನ ಯೋಜನೆಯಡಿ ನಿರ್ಮಿಸಿರುವ ನವ ಉದ್ಯಾನವನ ಉದ್ಘಾಟನೆ ಸಮಾರಂಭ ನಡೆಯಿತು.
ಕೇಂದ್ರದ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆಯ ಸಚಿವರು ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾದ ಡಿ ವಿ ಸದಾನಂದ ಗೌಡರು ಹಾಗೂ ಸ್ಥಳೀಯ ಶಾಸಕರು ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ ಗೋಪಾಲಯ್ಯ ಉದ್ಘಾಟಿಸಿದರು.
ಉದ್ಯಾನವನದ ಸುತ್ತಲೂ ಸುತ್ತಾಡಿ, ತೆರೆದ ಜಿಮ್, ಹಸಿರು ಗಿಡಗಳ ಮಧ್ಯೆ ಒಳ್ಳೆಯ ವಾತಾವರಣ ವೀಕ್ಷಿಸಿದರು. ನಂತರ ಮಾತನಾಡಿದ ಸಚಿವರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ನಗರೀಕರಣ ಒತ್ತಡದಿಂದ ಕಾಪಾಡಿಕೊಳ್ಳಲು ಪಾರ್ಕ್ಗಳು ಉಪಯುಕ್ತವಾಗಿವೆ.
ಸ್ಥಳೀಯ ನಿವಾಸಿಗಳು ಇದರ ಪ್ರಯೋಜನ ಪಡೆದು ಆರೋಗ್ಯಕರ ಜೀವನ ನಡೆಸಲು ತಿಳಿಸಿದರು. ಆಹಾರ ಸಚಿವರಾದ ಕೆ ಗೋಪಾಲಯ್ಯ ಅವರು ಮಹಾಲಕ್ಷ್ಮೀ ಲೇಔಟ್ ವಿಧಾನ ಸಭಾ ಕ್ಷೇತ್ರದ ಪ್ರತಿಯೊಬ್ಬ ನಾಗರಿಕರು ಸದೃಢ ಆರೋಗ್ಯ ಹಾಗೂ ಉತ್ತಮ ಜೀವನ ನಡೆಸಲು ಬೇಕಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನೇತೃತ್ವದ ಸರ್ಕಾರದಲ್ಲಿ ಇನ್ನೂ ಅತಿ ಹೆಚ್ಚಿನ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ನ್ನ ಮಾಡಲಾಗುವುದು ಎಂದರು.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ರಾದ ನರೇಂದ್ರ ಬಾಬು, ಬಿಬಿಎಂಪಿ ಮಾಜಿ ಉಪ ಮಹಾ ಪೌರರಾದ ಎಸ್,ಹರೀಶ್, ಭದ್ರೆಗೌಡ, ಬೆಂಗಳೂರು ಉತ್ತರ ಜಿಲ್ಲೆ ಬಿಜೆಪಿ ಅಧ್ಯಕ್ಷ ನಾರಾಯಣ ಗೌಡ, ಕ್ಷೇತ್ರ ಬಿಜೆಪಿ ಮಂಡಲ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಮಾಜಿ ಪಾಲಿಕೆ ಸದಸ್ಯ ರಾಜೇಂದ್ರ ಕುಮಾರ್, ವೆಂಕಟೇಶ್ ಮೂರ್ತಿ, ವೆಂಕಟೇಶ್ ಮಾಮಾ, ರೈಲ್ವೇ ನಾರಾಯಣ್, ಪ್ರಸನ್ನ ಮುನಿರಾಜು, ಬಿಬಿಎಂಪಿ ಹಿರಿಯ ಅಧಿಕಾರಿಗಳು ಹಾಜರಿದ್ದರು

ಫ್ರೆಶ್ ನ್ಯೂಸ್

Latest Posts

Featured Videos