ಪಶುಗಳಿಗೆ ವಿಶಿಷ್ಟ ಗುರುತಿನ ಸಂಖ್ಯೆ

ಪಶುಗಳಿಗೆ ವಿಶಿಷ್ಟ ಗುರುತಿನ ಸಂಖ್ಯೆ

ಗಂಗಾವತಿ: ತಾಲೂಕಿನ ವೆಂಕಟಗಿರಿ ಪಶು ಆಸ್ಪತ್ರೆ ಆವರಣದಲ್ಲಿ ಪಶುಗಳಿಗೆ ಕಾಲು ಮತ್ತು ಬಾಯಿ ರೋಗದ ಲಸಿಕೆ ಕಾರ್ಯಕ್ರಮವನ್ನು ಹಾಗೂ ವಿಶಿಷ್ಟ ಗುರುತಿನ ಸಂಖ್ಯೆ, ಕಿವಿ ಓಲೆ ಹಾಕುವ ಕಾರ್ಯಕ್ಕೆ ಜಿಲ್ಲಾ ಪಂಚಾಯತ್ ಸದಸ್ಯರಾದ ಲಕ್ಷ್ಮಮ್ಮ ಸಿದ್ದಪ್ಪ ನೀರಲೋಟಿ ಇವರು ಚಾಲನೆ ನೀಡಿದರು.

ಈ ವೇಳೆ ಮಾತನಾಡಿ, ಪ್ರತಿಯೊಬ್ಬ ಸಾರ್ವಜನಿಕರು ತಮ್ಮ ದನಕರುಗಳಿಗೆ ಕಾಲುಬಾಯಿ ಕಾಲುಬಾಯಿ ರೋಗ ಲಸಿಕೆಯನ್ನು ಅಳವಡಿಸಿಕೊಳ್ಳುವುದರ ಜೊತೆಗೆ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಪಡೆಯಲು ತಿಳಿಸಿದರು.
ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷರಾದ ಅಮರೇಗೌಡ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ರುದ್ರಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಮಂಜುನಾಥ, ಮುಖ್ಯ ಪಶು ವೈದ್ಯಾಧಿಕಾರಿ ಡಾ|| ಸೋಮಪ್ಪ ವೆಂಕಟಗಿರಿ, ಮಾಧವ ತೀರ್ಥ, ಶರಣಬಸವ, ಡಾಗಿ ಬಾಲಪ್ಪ, ಸಂಗನಗೌಡ, ಫಾರೂಕ್ ಹಾಗೂ ಇತರೇ ಗಣ್ಯ ವ್ಯಕ್ತಿಗಳು ಸಾರ್ವಜನಿಕರು ಭಾಗಿಯಾಗಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos