ಅಪರಿಚಿತ ಮಹಿಳೆ ಶವ ಪತ್ತೆ

ಅಪರಿಚಿತ ಮಹಿಳೆ ಶವ ಪತ್ತೆ

ಗದಗ, ಡಿ. 2 : ನಗರದ  ಭೀಷ್ಮ ಕೆರೆಯಲ್ಲಿ ಸೋಮವಾರ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.  ಕೆರೆಯಲ್ಲಿ ಮೃತ ದೇಹ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯ ವರ್ತಕರು ಗದಗ ಶಹರ ಠಾಣೆ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.  ತಕ್ಷಣ ಸ್ಥಳಕ್ಕೆ ಧಾವಿಸಿ ಪೊಲೀಸರು, ಬೋಟ್ ಮೂಲಕ ಶವವನ್ನು ಹೊರ ತೆಗೆದು, ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ.ಮೃತಳಿಗೆ ಸುಮಾರು 30 ವರ್ಷ ವಯಸ್ಸಾಗಿರಬಹುದು. ಮೂರು ದಿನಗಳ ಹಿಂದೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos