ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸಾವು!

ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸಾವು!

ನವದೆಹಲಿ, ಡಿ. 07: ಹೈದರಾಬಾದ್ ಎನ್ಕೌಂಟರ್ಗೆ ಅತ್ಯಾಚಾರ ಹಾಗೂ ಕೊಲೆ ಆರೋಪಿಗಳು ಬಲಿಯಾಗಿದ್ದಾರೆ. ಇಡೀ ದೇಶದಾದ್ಯಂತ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಆದರೆ ಈ ಎಲ್ಲದರ ನಡುವೆ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಉನ್ನಾವೋ ರೇಪ್ ಸಂತ್ರಸ್ತೆ ಸಾವನ್ನಪ್ಪಿದ್ದಾಳೆ.

ತನ್ನ ಮೇಲಾಗಿದ್ದ ಲೈಂಗಿಕ ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದ ಸಂತ್ರಸ್ತೆ ನ್ಯಾಯಾಲಯಕ್ಕೆ ಬರುತ್ತಿದ್ದ ವೇಳೆ ಜಾಮೀನಿನ ಮೇಲೆ ಹೊರಬಂದಿದ್ದ ಇಬ್ಬರು ಅತ್ಯಾಚಾರ ಆರೋಪಿಗಳು ಸೇರಿದಂತೆ ಐವರು, ಸಂತ್ರಸ್ತೆಗೆ ಬೆಂಕಿ ಹಚ್ಚಿದ್ದರು.

ಘಟನೆಯಿಂದ ಶೇ.90ರಷ್ಟು ದೇಹ ಸುಟ್ಟು ಹೋಗಿದ್ದರಿಂದ ಬದುಕುಳಿಯುವುದು ಕಷ್ಟ ಎಂದು ವೈದ್ಯರು ಮೊದಲೇ ತಿಳಿಸಿದ್ದರು. ಕೊನೆಗೂ ನೆನ್ನೆ ರಾತ್ರಿ 11:40ಕ್ಕೆ ಹೃದಯಾಘಾತದಿಂದ 23 ವರ್ಷದ ಯುವತಿ ಮೃತಪಟ್ಟಿದ್ದಾರೆ.

ಕಳೆದ ಡಿಸೆಂಬರ್ನಲ್ಲಿ 6 ಜನ ದುಷ್ಕರ್ಮಿಗಳು ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಮಾರ್ಚ್ ತಿಂಗಳಲ್ಲಿ ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದರು.

 

 

ಫ್ರೆಶ್ ನ್ಯೂಸ್

Latest Posts

Featured Videos