ಅನ್ಯಾವಶ್ಯಕವಾಗಿ ಓಡಾಡಿದ್ರೆ ಕೇಸ್ : ಸಿಎಂ ಎಚ್ಚರಕೆ

ಅನ್ಯಾವಶ್ಯಕವಾಗಿ ಓಡಾಡಿದ್ರೆ ಕೇಸ್ : ಸಿಎಂ ಎಚ್ಚರಕೆ

ಬೆಂಗಳೂರು : ಕೊರೊನಾ ವೈರಸ್ ಭೀತಿ ದಿನೇದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಐದು ಏರಿಯಾಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಸೀಲ್‌ಡೌನ್ ಪ್ರದೇಶಗಳಲ್ಲಿ ಅನಗತ್ಯವಾಗಿ ಓಡಾಟ ಮಾಡುವವರ ಮೇಲೆ ಕಠಿಣ ಕ್ರಮಕೈಗೊಳ್ಳುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಈ ಪ್ರದೇಶಗಳಲ್ಲಿ ಮಾಸ್ಕ್ ಹಾಕದೇ ವಿನಾಕಾರಣ ಓಡಾಟ ಮಾಡಿದರೆ ಅಂತಹವರ ವಿರುದ್ಧ ಸಂಬAಧಪಟ್ಟ ಠಾಣೆಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲು ನಿರ್ಧರಿಸಲಾಗಿದೆ.
ಬೆಂಗಳೂರಿನ ಸಿದ್ದಾಪುರ, ವಿ.ವಿ.ಪುರಂ, ಚಿಕ್ಕಪೇಟೆ, ಕೆ.ಆರ್.ಮಾರುಕಟ್ಟೆ, ಕಲಾಸಿಪಾಳ್ಯ ಪ್ರದೇಶಗಳಲ್ಲಿ ಕೊರೊನಾ ವೈರಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೀಲ್‌ಡೌನ್ ಪ್ರದೇಶಗಳಲ್ಲಿ ಕೊರೊನಾ ಪ್ರಕರಣಗಳು ಅತಿ ಹೆಚ್ಚು ವರದಿಯಾಗಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಸೀಲ್‌ಡೌನ್ ಮಾಡಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos