ಗುಜರಾತ್ ಜೈನ್ಸ್ ವಿರುದ್ಧ ಯುಪಿ ವಾರಿಯರ್ಸ್ ಗೆ ಭರ್ಜರಿ ಜಯ

ಗುಜರಾತ್ ಜೈನ್ಸ್ ವಿರುದ್ಧ ಯುಪಿ ವಾರಿಯರ್ಸ್ ಗೆ ಭರ್ಜರಿ ಜಯ

ಬೆಂಗಳೂರು:ಎಂ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ವುಮೆನ್ಸ್ ಪ್ರೀಮಿಯಲ್ಲಿ ಪಂದ್ಯದಲ್ಲಿ ನೆನ್ನೆ ಗುಜರಾತ್ ಜೈನ್ಸ್ ಹಾಗೂ ಯುಪಿಆರ್ಎಸ್ ತಂಡಗಳು ಮುಖಾಮುಖಿಯಾಗಿತ್ತು ಈ ಪಂದ್ಯದಲ್ಲಿ ಗುಜರಾತ್ ಜೈನ್ಸ್ ವಿರುದ್ಧ ಯುಪಿ ವಾರಿಯರ್ಸ್ ತಂಡ ಆರು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್, ಉತ್ತಮ ಆರಂಭ ಪಡೆಯಿತು. ನಾಯಕಿ ಬೆಥ್ ಮೂನಿ 16 ಎಸೆತಗಳಲ್ಲಿ 2 ಬೌಂಡರಿ ಸಹಿತ 16 ರನ್ ಗಳಿಸಿ ಸೋಫಿ ಎಕ್ಸೆಸ್ಟೋನ್ ಅವರ ಎಸೆತಕ್ಕೆ ಗ್ರೇಸ್ ಹರಿಸ್ ಗೆ ಕ್ಯಾಚಿತ್ತು ಪೆವಿಲಿಯನ್ ಹಾದಿ ಹಿಡಿದರು.

ಗುಜರಾತ್ ಜೈಂಟ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 142 ರನ್ ಗಳಿಸಿತು. ಈ ಮೊತ್ತ ಚೇಸ್ ಮಾಡಿದ ಯುಪಿ ವಾರಿಯರ್ಸ್ ಆರಂಭಿಕ ಬ್ಯಾಟರ್ ಗಳಾಗಿ ಕ್ರೀಸ್ ಗೆ ಇಳಿದ ತಂಡದ ನಾಯಕಿ ಅಲಿಸ್ಸಾ ಹೀಲಿ 21 ಎಸೆತಗಳಲ್ಲಿ 7 ಬೌಂಡರಿ ಸಹಿತ 33 ರನ್ ಗಳಿಸಿ ಪೆವಿಲಿಯನ್ ಹಾದಿ ಹಿಡಿದರು. ಕಿರಣ್ ನೌಗಿರೆ 8 ಎಸೆತ ಎದುರಿಸಿ 2 ಬೌಂಡರಿಯೊಂದಿಗೆ 12 ರನ್ ಗಳಿಸಿ ನಿರ್ಗಮಿಸಿದರು. ಚಾಮರಿ 17 ರನ್ ಗಳಿಸಿದರೆ, ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ್ದ ಗ್ರೇಸ್ ಹ್ಯಾರಿಸ್ 33 ಎಸೆತದಲ್ಲಿ 9 ಬೌಂಡರಿ 2 ಸಿಕ್ಸರ್ ಸಹಿತ 60 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಶ್ವೇತಾ 2 ಹಾಗೂ ದೀಪ್ತಿ ಶರ್ಮಾ17 ರನ್ ಬಾರಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಫ್ರೆಶ್ ನ್ಯೂಸ್

Latest Posts

Featured Videos