ಯುಪಿಎಸ್ ಸಿ ನೇಮಕಾತಿ

ಯುಪಿಎಸ್ ಸಿ ನೇಮಕಾತಿ

ಬೆಂಗಳೂರು, ಜೂ. 25: ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್ ಸಿ) ಸಿಸ್ಟಂ ಅನಾಲಿಸ್ಟ್, ಕಂಪೆನಿ ಪ್ರಾಸ್ಪೆಕ್ಟರ್, ಸೂಪರಿಂಟೆಂಡೆಂಟ್, ಡೆಪ್ಯುಟಿ ಡೈರೆಕ್ಟರ್ ಮತ್ತು ಅಸಿಸ್ಟೆಂಟ್ ಕೆಮಿಸ್ಟ್ ಒಟ್ಟು 13 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ/ಎಂ.ಎಸ್ಸಿ/ಬಿ.ಇ/ಬಿ.ಟೆಕ್, ಕಾನೂನು ಪದವಿ,ಪದವಿ,ಸ್ನಾತಕೋತ್ತರ ಪದವಿ ಮತ್ತು ಪೋಸ್ಟ್ ಗ್ರಾಜುಯೇಟ್ ಡಿಪ್ಲೋಮ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ: ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಅಭ್ಯರ್ಥಿಗಳು 25/-ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ /ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಸಂಪೂರ್ಣವಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಆನ್ ಲೈನ್ ನಲ್ಲಿ ಸಲ್ಲಿಸಲು ಜುಲೈ 12,2019 ಕೊನೆಯ ದಿನವಾಗಿರುತ್ತದೆ.

 

ಫ್ರೆಶ್ ನ್ಯೂಸ್

Latest Posts

Featured Videos