ಯುಪಿಎಸ್ ಸಿ ನೇಮಕಾತಿ

ಯುಪಿಎಸ್ ಸಿ ನೇಮಕಾತಿ

ಬೆಂಗಳೂರು, ಏ. 15, ನ್ಯೂಸ್ ಎಕ್ಸ್ ಪ್ರೆಸ್: ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್ ಸಿ) ನೇಮಕಾತಿ 51 ಅಸಿಸ್ಟೆಂಟ್ ಹೈಡ್ರೋಜಿಯೋಲಜಿಸ್ಟ್ ಮತ್ತು ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಯುಪಿಎಸ್ಸಿಯ ಅಧಿಕೃತ ವೆಬ್ಸೈಟ್ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 2,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಡೈರೆಕ್ಟರ್ ಹುದ್ದೆಗಳಿಗೆ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಪಿ.ಹೆಚ್ಡಿ ಅಥವಾ ಎಂ.ಫಿಲ್ ಮತ್ತು ಅಸಿಸ್ಟೆಂಟ್ ಹೈಡ್ರೋಲಜಿಸ್ಟ್ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಡೈರೆಕ್ಟರ್ ಹುದ್ದೆಗಳಿಗೆ ಗರಿಷ್ಟ 50 ವರ್ಷ ಮತ್ತು ಅಸಿಸ್ಟೆಂಟ್ ಹೈಡ್ರೋಲಜಿಸ್ಟ್ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವೇತನದ ವಿವರ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಯುಪಿಎಸ್ಸಿ ನಿಯಮಾನುಸಾರ ವೇತನವನ್ನು ನೀಡಲಾಗುವುದು

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು 25/-ರೂ ಆನ್ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ / ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು: ಅಭ್ಯರ್ಥಿಗಳು ಯುಪಿಎಸ್ಸಿಯ ಅಧಿಕೃತ ವೆಬ್ಸೈಟ್  ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಫ್ರೆಶ್ ನ್ಯೂಸ್

Latest Posts

Featured Videos