ನಟಿ ಊರ್ಮಿಳಾ ಕಾಂಗ್ರೆಸ್ ಸೇರ್ಪಡೆ

ನಟಿ ಊರ್ಮಿಳಾ ಕಾಂಗ್ರೆಸ್ ಸೇರ್ಪಡೆ

ನವದೆಹಲಿ, ಮಾ, 27, ನ್ಯೂಸ್ ಎಕ್ಸ್ ಪ್ರೆಸ್: ಬಾಲಿವುಡ್ ಹಿರಿಯ ನಟಿ ಊರ್ಮಿಳಾ ಮಾತೊಂಡ್ಕರ್ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಊರ್ಮಿಳಾ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಊರ್ಮಿಳಾ ಜೊತೆಗಿರುವ ರಾಹುಲ್ ಗಾಂಧಿ ಫೋಟೋವನ್ನು ಕಾಂಗ್ರೆಸ್ ಅಧಿಕೃತ ಟ್ವೀಟರ್ ನಲ್ಲಿ ಹಂಚಿಕೊಂಡಿದೆ.

ಕಾಂಗ್ರೆಸ್ ಗೆ ಸೇರ್ಪಡೆಯಾದ್ಮೇಲೆ ಊರ್ಮಿಳಾ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಆದ್ರೆ ಯಾವ ಕ್ಷೇತ್ರದಿಂದ ಸ್ಪರ್ಧೆ ನಡೆಸ್ತೇನೆ ಎಂಬುದನ್ನು ಊರ್ಮಿಳಾ ಹೇಳಿಲ್ಲ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಹೂಗುಚ್ಛ ನೀಡಿ ಊರ್ಮಿಳಾರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ.

ಊರ್ಮಿಳಾ, ಕಾಂಗ್ರೆಸ್ ಸೇರ್ತಾರೆಂಬ ಸುದ್ದಿಯಿತ್ತು. ಮುಂಬೈ ಉತ್ತರದಿಂದ ಅವ್ರ ಸ್ಪರ್ಧೆ ಎಂಬ ಸುದ್ದಿಯೂ ಇದೆ. ಆದ್ರೆ ಊರ್ಮಿಳಾ ಯಾವ ಕ್ಷೇತ್ರದಿಂದ ಕಣಕ್ಕಿಳಿತಾರೆ ಎಂಬುದು ಇನ್ನೂ ಅಧಿಕೃತವಾಗಿಲ್ಲ.

ಫ್ರೆಶ್ ನ್ಯೂಸ್

Latest Posts

Featured Videos