ಇನ್ನೂ 3 ದಿನ ಬಾರೀ ಮಳೆ

ಇನ್ನೂ 3 ದಿನ ಬಾರೀ ಮಳೆ

ಬೆಂಗಳೂರು, ಆ. 30: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ರಾಜ್ಯದ ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮತ್ತೆ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಮೂಲದಿಂದ ತಿಳಿದ್ದು ಬಂದಿದೆ.
ಬಂಗಾಳಕೊಲ್ಲಿಯ ಆಂಧ್ರದ ಕರಾವಳಿ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಹೈದರಾಬಾದ್ ಕರ್ನಾಟಕ ಪ್ರದೇಶದ ಕಲಬುರಗಿ, ಬೀದರ್, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 2ರಿಂದ ಮೂರು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos