ಉತ್ತರ ಕರ್ನಾಟಕದ ಜನ ಆತಂಕ

ಉತ್ತರ ಕರ್ನಾಟಕದ ಜನ ಆತಂಕ

ಬೆಂಗಳೂರು, ಆ.4 : ಕೃಷ್ಣ ನದಿಯ ಮೂಲಕ ಭಾರೀ ಪ್ರಮಾಣದ ನೀರು ಹರಿದು ಬರುತ್ತಿರುವ ಕಾರಣ ಉತ್ತರ ಕರ್ನಾಟಕದ ಜನ ಆತಂಕಕ್ಕೊಳಗಾಗಿದ್ದಾರೆ. ಕೃಷ್ಣ ನದಿ ತೀರದ ಬೆಳಗಾವಿ, ಬಾಗಲಕೋಟ, ವಿಜಯಪುರ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯ ಜನರಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭೀಕರ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೃಷ್ಣ ನದಿ ತೀರದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸುವ ಕಾರ್ಯ ನಡೆಯುತ್ತಿದೆ.
ಸದ್ಯ ಕೃಷ್ಣ ನದಿಗೆ 2.5 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಯಾವುದೇ ಸಂದರ್ಭದಲ್ಲಿ 50 ಕ್ಯಾಸೆಕ್ ನೀರು ಬಿಡುವ ಸಾಧ್ಯತೆ ಇದೆ. ಹೀಗಾಗಿ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲು ಎನ್ಡಿಆರ್ಎಫ್ ಹಾಗೂ ಸೇನೆ ಕಾರ್ಯಚರಣೆ ನಡೆಸುತ್ತಿದೆ. 100ರಕ್ಕೂ ಅಧಿಕ ಸೈನಿಕರು ಮತ್ತು 45ಕ್ಕೂ ಅಧಿಕ ಎನ್ಡಿಆರ್ಎಫ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ರಾಯಚೂರು ತಾಲೂಕಿನ ಕೃಷ್ಣಾ ನದಿ ತೀರದ ಆತ್ಕೂರು ಗ್ರಾಮಕ್ಕೆ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಭೇಟಿ ನೀಡಿದರು. ಈ ವೇಳೆ ಅವರು ಕೃಷ್ಣಾ ನದಿಯ ಪ್ರವಾಹ ದಿಂದಾಗಿರುವ ತೊಂದರೆಯ

ಫ್ರೆಶ್ ನ್ಯೂಸ್

Latest Posts

Featured Videos