ವಾರಣಾಸಿಯಲ್ಲಿ ಏ. 25ಕ್ಕೆ ಮೋದಿ ರೋಡ್ ಶೋ

ವಾರಣಾಸಿಯಲ್ಲಿ ಏ. 25ಕ್ಕೆ ಮೋದಿ ರೋಡ್ ಶೋ

ನವದೆಹಲಿ, . 22 ನ್ಯೂಸ್ ಎಕ್ಸ್ ಪ್ರೆಸ್: 2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದು, ಏ. 26ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಅಲ್ಲದೇ ನಾಮಪತ್ರ ಸಲ್ಲಿಕೆಗೂ ಮುನ್ನ ಭರ್ಜರಿ ರೋಡ್ ಶೋ ನಡೆಯಲಿದೆ ಎಂದು ವರದಿ ತಿಳಿಸಿದೆ.

2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿ ಕ್ಷೇತ್ರದಲ್ಲಿ ತಮ್ಮ ಪ್ರತಿಸ್ಪರ್ಧಿ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಅವರನ್ನು ಪರಾಜಯಗೊಳಿಸಿದ್ದರು. ಈ ಬಾರಿಯೂ ಕೂಡಾ ವಾರಣಾಸಿಯಿಂದ ಅಖಾಡಕ್ಕಿಳಿಯಲಿರುವ ಮೋದಿ ಏ. 25ರಂದು ಭರ್ಜರಿ ರೋಡ್ ಶೋ ನಡೆಸಲು ಉದ್ದೇಶಿಸಿರುವುದಾಗಿ ಮಾಧ್ಯಮದ ವರದಿ ವಿವರಿಸಿದೆ.

 

ಫ್ರೆಶ್ ನ್ಯೂಸ್

Latest Posts

Featured Videos