ಬೆಂಗಳೂರು: ವಿಶ್ವ ಮೀನುಗಾರಿಕೆ ದಿನಾಚರಣೆಯ ಪ್ರಯುಕ್ತ ಮೀನುಗಾರಿಕೆ ಇಲಾಖೆಯ ವತಿಯಿಂದ ವಿಧಾನಸೌಧದ ಭವ್ಯ ಮೆಟ್ಟಿಲು ಬಳಿ ಹಮ್ಮಿಕೊಂಡಿದ ಮತ್ಸ್ಯ ವಾಹಿನಿ-ಪರಿಸರ ಸ್ನೇಹಿ ತ್ರಿಚಕ್ರ ವಾಹನ ವಿತರಣಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಬಳಿಕ, ಮೀನುಗಾರಿಕೆ ಇಲಾಖೆಯ ವತಿಯಿಂದ ವಿಧಾನಸೌಧದ ಒಳಾವರಣದಲ್ಲಿ ಹಾಕಲಾಗಿರುವ ಮಳಿಗೆಗಳಿಗೆ ಮುಖ್ಯಮಂತ್ರಿಯವರು ಭೇಟಿ ನೀಡಿ, ವೀಕ್ಷಿಸಿದರು.
ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಮಂಕಾಳ ಎಸ್ ವೈದ್ಯ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಸಲ್ಮಾ ಫಾಹಿಮ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.