ವೀರಶೈವರು ಕೈಬಿಡುವುದಿಲ್ಲ: ಸಿಎಂ

ವೀರಶೈವರು  ಕೈಬಿಡುವುದಿಲ್ಲ: ಸಿಎಂ

 ಬೆಳಗಾವಿ, ನ. 24 :  ಈಗ ನಡೆಯುತ್ತಿರುವ ಉಪ ಚುನಾವಣೆಯೂ ಸೇರಿದಂತೆ ಯಾವುದೇ ಸಂದರ್ಭದಲ್ಲೂ ವೀರಶೈವ ಸಮಾಜದವರು ಯಾವುದೇ ಕಾರಣಕ್ಕೂ ನಮ್ಮ ಕೈ ಬಿಡುವುದಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ‘ಉಪಚುನಾವಣೆ ಕಣದಲ್ಲಿರುವ 15 ಅನರ್ಹ ಶಾಸಕರ ಪ್ರಯತ್ನದಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ. ಸಣ್ಣಪುಟ್ಟ ವ್ಯತ್ಯಾಸ ಬದಿಗಿಟ್ಟು 15 ಜನರನ್ನು ವೀರಶೈವ ಸಮುದಾಯವರು ಬೆಂಬಲಿಸಬೇಕು’ ಎಂದರು.
ಅಥಣಿ, ಕಾಗವಾಡ, ಗೋಕಾಕದಲ್ಲಿ ನಡೆದ ಪ್ರಚಾರ ಸಭೆಗಳಿಗೆ ನಿರೀಕ್ಷೆಗೂ ಹೆಚ್ಚಿನ ಜನರು ಸೇರಿದ್ದರು. ರಮೇಶ ಜಾರಕಿಹೊಳಿ ಕ್ಷೇತ್ರ ಗೋಕಾಕದಲ್ಲಿ ಅತಿ ದೊಡ್ಡ ಪ್ರಮಾಣದಲ್ಲಿ ಪ್ರಚಾರ ಸಭೆ ಮಾಡಲಾಯಿತು. 15 ಕ್ಷೇತ್ರಗಳಲ್ಲೂ ಗೆಲ್ಲುವ ಸಂಕಲ್ಪ ನಮ್ಮದು. ಅದೇ ವಾತಾವರಣ ಇದೆ. ಕಾಂಗ್ರೆಸ್, ಜೆಡಿಎಸ್ ನಾಯಕರು ಏನೇ ಹೇಳಿದರೂ ನಾವು ಎಲ್ಲ ಕಡೆಗಳಲ್ಲೂ ಗೆಲ್ಲುತ್ತೇವೆ’ ಎಂದರು. ಮುಂದಿನ ಮೂರೂವರೆ ವರ್ಷ ಅಭಿವೃದ್ಧಿ ಕಾರ್ಯಗಳತ್ತ ಹೆಚ್ಚಿನ ಗಮನ ಕೊಡುತ್ತೇನೆ’ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos