ಮಂಡ್ಯ ಲೋಕಸಭಾ ಕ್ಷೇತ್ರ: ವೆಂಕಟರಮಣೇಗೌಡ ನಾಮಪತ್ರ ಸಲ್ಲಿಕೆ

ಮಂಡ್ಯ ಲೋಕಸಭಾ ಕ್ಷೇತ್ರ: ವೆಂಕಟರಮಣೇಗೌಡ ನಾಮಪತ್ರ ಸಲ್ಲಿಕೆ

ಮಂಡ್ಯ: ಈ ಬಾರಿ ಲೋಕಸಭಾ ಚುನಾವಣೆ ರಂಗೇರಿದ್ದು ರಾಜ್ಯದಲ್ಲೇ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸುತ್ತಿದ್ದಾರೆ. ಕಳೆದ ಲೋಕಸಭೆಯಂತೆ ಈ ಬಾರಿಯೂ ಮಂಡ್ಯ ಲೋಕಸಭೆ ಜಿದ್ದಾಜಿದ್ದಿಗೆ ಕಾರಣವಾಗಿದೆ, ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರು ಕಣಕ್ಕಿಳಿದಿದ್ದಾರೆ, ಕಾಂಗ್ರೆಸ್ ನಿಂದ ವೆಂಕಟರಮಣೇಗೌಡ ಅವರು ಕಣಕ್ಕಿಳಿದಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ವೆಂಕಟರಮಣೇಗೌಡ ಅವರು ನಾಮಪತ್ರ ಸಲ್ಲಿಕೆ ಮಾಡಿದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಮಣೇಗೌಡ ಅವರು ಇಂದು ಚುನಾವಣಾಧಿಕಾರಿ ಡಾ.ಕುಮಾರ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಎನ್. ಚೆಲುವರಾಯಸ್ವಾಮಿ, ಶಾಸಕ ನರೇಂದ್ರಸ್ವಾಮಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆಗೂ ಮುನ್ನಾ  ಸ್ಟಾರ್ ಚಂದ್ರು ಅವರು ಶ್ರೀ ಆದಿ ಚುಂಚನಗಿರಿ ಮಠದಲ್ಲಿ ಶ್ರೀ ಕಾಲ ಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಾದ ಪಡೆದರು.

ನಂತರ ಮಂಡ್ಯ ನಗರದ ಶಕ್ತಿ ದೇವತೆ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ತೆರೆದ ವಾಹನದಲ್ಲಿ ಶ್ರೀ ಕಾಳಿಕಾಂಬ ದೇವಸ್ಥಾನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಮೆರವಣಿಗೆ ಮಾಡುವ ಮೂಲಕ ಕಾಂಗ್ರೇಸ್ ಅಭ್ಯರ್ಥಿ ಸ್ವಾರ್ ಚಂದ್ರು  ತಮ್ಮ ಶಕ್ತಿ ಪ್ರದರ್ಶನ ಮಾಡಿದರು.

ಫ್ರೆಶ್ ನ್ಯೂಸ್

Latest Posts

Featured Videos