ತೆಂಡೂಲ್ಕರ್ ದಾಖಲೆ ಮುರಿದ ವರ್ಮಾ!

ತೆಂಡೂಲ್ಕರ್ ದಾಖಲೆ ಮುರಿದ ವರ್ಮಾ!

ಗ್ರಾಸ್ ಐಲೆಟ್, ನ.10 : ಭಾರತ ಮಹಿಳಾ ಕ್ರಿಕೆಟ್ ತಂಡದ ಯುವ ಆಟಗಾರ್ತಿ ಶಫಾಲಿ ವರ್ಮಾ, ಇಲ್ಲಿ ನಡೆಯುತ್ತಿರುವ ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಕ್ರಿಕೆಟ್ ಸರಣಿಯಲ್ಲಿನ ಮೊದಲ ಪಂದ್ಯದಲ್ಲೇ ಬ್ಯಾಟಿಂಗ್ ಪರಾಕ್ರಮ ಮೆರೆದು ಭಾರತ ಕ್ರಿಕೆಟ್ನ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ.
ಇಲ್ಲಿನ ಡರ್ರೆನ್ ಸಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಅಕ್ಷರಶಃ ಮಿಂಚಿನ ಬ್ಯಾಟಿಂಗ್ ನಡೆಸಿದ 15 ವರ್ಷದ ಯುವ ಆರಂಭಿಕ ಬ್ಯಾಟರ್ ಶಫಾಲಿ, 49 ಎಸೆತಗಳಲ್ಲಿ 6 ಫೋರ್ ಮತ್ತು 4 ಸಿಕ್ಸರ್ ಒಳಗೊಂಡ 73 ರನ್ಗಳನ್ನು ಚಚ್ಚಿದರು.

ಫ್ರೆಶ್ ನ್ಯೂಸ್

Latest Posts

Featured Videos