ಬಿಎಂಟಿಸಿ ಬಸ್​ಗೆ ಮತ್ತೊಂದು ಬಲಿ!!

ಬಿಎಂಟಿಸಿ ಬಸ್​ಗೆ ಮತ್ತೊಂದು ಬಲಿ!!

ಬೆಂಗಳೂರು: ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿರುವ ವಿಚಾರ. ಬಿಎಂಟಿಸಿ ಬಾಸ್ ಗೆ ಮತ್ತೊಂದು ಬಲಿಯಾಗಿದೆ. ಬಿಎಂಟಿಸಿ ವೋಲ್ವೋ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು. ಮಾರತಳ್ಳಿಯ ವರ್ತೂರು ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಬೈಕ್​ ಸವಾರ ಎಳಂಗೋವನ್ ಸೆಂಕತ್ತವಲ್(43) ಮೃತ ದುರ್ದೈವಿ. ಅಪಘಾತದಿಂದ ಸವಾರನ ತಲೆ ಹಾಗೂ ಮುಖದ ಭಾಗಕ್ಕೆ ಬಲವಾದ ಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಪ್ರಾಣ ಹೋಗಿದೆ.

ನಿನ್ನೆ ಬೆಳಗ್ಗೆ 9.30ರ ಸುಮಾರಿಗೆ ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರಿಗೆ ಮೃತ ಬೈಕ್​ ಸವಾರ ಎಳಂಗೋವನ್ ಸೆಂಕತ್ತವಲ್ ತೆರಳುತ್ತಿದ್ದರು. ಅದೇ ಮಾರ್ಗದಲ್ಲಿ ಬರುತ್ತಿದ್ದ ಬಿಎಂಟಿಸಿ ವೊಲ್ವೋ ಬಸ್ ಡಿಕ್ಕಿ ಹೊಡೆದಿದೆ. ಬಸ್​ ಡಿಕ್ಕಿ ರಭಸಕ್ಕೆ ಬೈಕ್​ ಸವಾರ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದಿಂದ ತಲೆ ಹಾಗೂ ಮುಖದ ಭಾಗಕ್ಕೆ ಗಂಭೀರ ಗಾಯವಾಗಿತ್ತು. ತಕ್ಷಣ ಆಸ್ಪತ್ರೆಗೆ ಕರೆದೊಯ್ಯುಲಾಗಿದ್ದು ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಹೆಚ್​ಎಎಲ್​​ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos