ವಿಜಯಪುರದ ಝಳಕಿಯಲ್ಲಿ ಸರಣಿ ಅಪಘಾತ, ಮೂವರು ದುರ್ಮರಣ

ವಿಜಯಪುರದ ಝಳಕಿಯಲ್ಲಿ ಸರಣಿ ಅಪಘಾತ, ಮೂವರು ದುರ್ಮರಣ

ವಿಜಯಪುರ: 2 ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಸರಣಿ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಝಳಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇಂದು ಬೆಳಗ್ಗೆ ಇಂಡಿ ತಾಲೂಕಿನ ಝಳಕಿ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಎರಡು ಲಾರಿಗಳ ನಡುವೆ ಡಿಕ್ಕಿ ಸಂಭವಿಸಿದೆ. ನಂತರ ಹಿಂಬದಿಯಿಂದ ಬಂದ ಕಾರೊಂದು ಲಾರಿಗೆ ಡಿಕ್ಕಿ ಹೊಡೆದಿದೆ.

ಲಾರಿಗಳ ಮುಖಾಮುಖಿಯಾಗಿದ್ದರಿಂದ ಇಬ್ಬರು ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಾಗೂ ಕ್ಲೀನರ್ ಲಾರಿ ಕೆಳಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಮೃತರ ಗುರುತು ಇನ್ನು ಪತ್ತೆಯಾಗಿಲ್ಲ.

ಅಪಘಾತ ಸಂಭವಿಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಎರಡೂ ಬದಿಯಲ್ಲಿ ವಾಹನಗಳು ಕಿ.ಮೀ.ಗಟ್ಟಲೇ ಸಾಲುಗಟ್ಟಿ ನಿಂತಿದ್ದವು.

ಸುದ್ದಿ ತಿಳಿದ ಸಂಚಾರಿ ಪೊಲೀಸರು ಸ್ಥಳಕ್ಕಾಮಿಸಿ ಲಾರಿಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos