ಗ್ಯಾರಂಟಿ ಯೋಜನೆ ಸ್ಥಗಿತ: ವಿಜಯೇಂದ್ರ

ಗ್ಯಾರಂಟಿ ಯೋಜನೆ ಸ್ಥಗಿತ: ವಿಜಯೇಂದ್ರ

ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ನೀಡಿದ ಐದು ಗ್ಯಾರಂಟಿ ಯೋಜನೆಗಳನ್ನು ಬಹಳ ಅದ್ದೂರಿಯಾಗಿ ಚಾಲನೆ ಮಾಡಲಾಗಿದೆ. ಲೋಕಸಭೆ ಚುನಾವಣೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಗಳು ಸ್ಥಗಿತವಾಗಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಬೇಗೂರು ಗ್ರಾಮದಲ್ಲಿ ಭಾನುವಾರ ನಡೆದ ಹೊಸೂರು ಮಹಾ ಶಕ್ತಿ ಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ ಹಾಗೂ ಅಭ್ಯರ್ಥಿ ಬಿ.ವೈ ರಾಘವೇಂದ್ರ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ 28 ಕ್ಷೇತ್ರಗಳಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಕೂಟ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆಡಳಿತದಲ್ಲಿ ಅನುಭವ ಹೊಂದಿರುವ ಸಿಎಂ ಸಿದ್ದರಾಮಯ್ಯ ಬರಗಾಲದಿಂದ, ಸಂಕಷ್ಟದಲ್ಲಿರುವ ರೈತರಿಗೆ ಸ್ಪಂದಿಸಿಲ್ಲ. ಕೇಂದ್ರದಿಂದ ಬರ ಪರಿಹಾರ ಬಂದಿಲ್ಲ ಎಂದು ಗೂಬೆ ಕೂರಿಸುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಎಂದು ಟೀಕಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos