ಸಿಎಂ ಹಾಗೂ ಡಿಸಿಎಂ ಆಟ ಇನ್ನು ಮುಂದೆ ನಡೆಯಲ್ಲಾ: ವಿಜಯೇಂದ್ರ

ಸಿಎಂ ಹಾಗೂ ಡಿಸಿಎಂ ಆಟ ಇನ್ನು ಮುಂದೆ ನಡೆಯಲ್ಲಾ: ವಿಜಯೇಂದ್ರ

ಚಾಮರಾಜನಗರ: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ  ಸ್ಪರ್ಧಿಸುತಿದ್ದಾರೆ. ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು ರಾಜ್ಯದೆಲ್ಲಾಡೆ ಅಭ್ಯರ್ಥಿಗಳು ಮತ ಬೇಟೆ ಯಾಚಿಸುತ್ತಿದ್ದಾರೆ

ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ಅವರು 2 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನಿನ್ನೆ ವಿಶ್ವಾಸ ವ್ಯಕ್ತಪಡಿಸಿದರು.

ಬಾಲರಾಜು ಪರ ರೋಡ್‌ ಶೋ ನಡೆಸಲು ನಗರಕ್ಕೆ ಬಂದಿದ್ದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಟ ಇನ್ನು ಮುಂದೆ ನಡೆಯುವುದಿಲ್ಲ.

ಚಾಮರಾಜನಗರದ ಜಿಲ್ಲೆಯಲ್ಲಿ ಅವರು ಮೂಲೆಗುಂಪಾಗಿದ್ದಾರೆ. ಸಂಸದ ವಿ ಶ್ರೀನಿವಾಸ್ ಪ್ರಸಾದ್ ಹಾಗೂ ಅಳಿಯ ಮಾಜಿ ಶಾಸಕ ಹರ್ಷವರ್ಧನ್ ನಮ್ಮ ಬೆಂಬಲಕ್ಕೆ ನಿಂತಿದ್ದಾರೆ. ಹಾಗಾಗಿ ನಮ್ಮ ಗೆಲುವು ಖಚಿತ’ ಎಂದರು.

‘ಶ್ರೀನಿವಾಸ್ ಪ್ರಸಾದ್ ಅವರು ಅನುಭವಿ ರಾಜಕಾರಣಿ. ಆ ಕಾರಣ ಎಲ್ಲ ಪಕ್ಷದವರು ಅವರ ಬಳಿ ಹೋಗಿ ಆಶೀರ್ವಾದ ಪಡೆದುಕೊಂಡು ಬರುತ್ತಿದ್ದಾರೆ. ನಮ್ಮ ಪಕ್ಷಕ್ಕೆ ಅವರು ಬೆನ್ನೆಲುಬಾಗಿ ನಿಂತಿದ್ದಾರೆ’ ಎಂದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತದಾ‌ರ ಕಿವಿಗೆ ಹೂ ಮುಡಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ದಲಿತ ವಿರೋಧಿ ಸರ್ಕಾರವಾಗಿದೆ. ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಯೋಜನೆಯ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಂಡು ದಲಿತ ಸಮುದಾಯಕ್ಕೆ ಮೋಸ ಮಾಡಿದ್ದಾರೆ. ಮಹಿಳೆಯರಿಗೆ ₹2000 ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ, ಮತ್ತೊಂದು ಕಡೆ ಮದ್ಯದ ಬೆಲೆಯಲ್ಲಿ ಹೆಚ್ಚಿಸುತ್ತಿದ್ದಾರೆ. ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದ್ದಾರೆ’ ಎಂದು ದೂರಿದರು.

 

 

ಫ್ರೆಶ್ ನ್ಯೂಸ್

Latest Posts

Featured Videos