ಹಾಸನದಲ್ಲಿ ಮೈತ್ರಿ ಅಭ್ಯರ್ಥಿ ಪರ ವಿಜಯೇಂದ್ರ ಮತಬೇಟೆ

ಹಾಸನದಲ್ಲಿ ಮೈತ್ರಿ ಅಭ್ಯರ್ಥಿ ಪರ ವಿಜಯೇಂದ್ರ ಮತಬೇಟೆ

ಹಾಸನ: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು. ಈಗಾಗಲೇ ಎಲ್ಲಾ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ನಿನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸಿ ಅಬ್ಬರದ ಪ್ರಚಾರ ಕೈಗೊಂಡಿದ್ದರು.

ನರೇಂದ್ರ ಮೋದಿ ಆಗಮನದಿಂದ ರಾಜ್ಯ ಬಿಜೆಪಿ ನಾಯಕರಿಗೆ ಬೂಸ್ಟ್ ಕೊಟ್ಟಂತಾಗಿದ್ದು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮೈತ್ರಿ ಅಭ್ಯರ್ಥಿ ಪರ ಪ್ರಚಾರಕ್ಕಿಳಿಯಲಿದ್ದಾರೆ. ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಪರ ಹಾಸನ ಜಿಲ್ಲೆಯಲ್ಲಿ ಇಂದು ಬಿವೈ ಬಿಜಯೇಂದ್ರ ಮತಯಾಚನೆ ಮಾಡಲಿದ್ದು, ಬೆಳಿಗ್ಗೆ 10.30ಕ್ಕೆ ಹೊಳೆನರಸೀಪುರಕ್ಕೆ ಆಗಮಿಸಲಿರುವ ಬಿ‌ವೈ ವಿಜಯೇಂದ್ರ, ಹೊಳೆನರಸೀಪುರ ಪಟ್ಟಣದ ಹೇಮಾವತಿ ಕ್ರೀಡಾಂಗಣದಲ್ಲಿ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಮಾಡಲಿದ್ದಾರೆ.

ನಂತರ ಸಕಲೇಶಪುರದಲ್ಲಿ‌ ಆಯೋಜಿಸಲಾಗಿರುವ ರೋಡ್‌ ಶೋದಲ್ಲಿ ಮೈತ್ರಿ ಅಭ್ಯರ್ಥಿ ಪರ ಮತಯಾಚನೆ ಮಾಡಲಿದ್ದು, ಮಧ್ಯಾಹ್ನ 2.30 ಕ್ಕೆ ಸಕಲೇಶ್ವರಸ್ವಾಮಿ ದೇವಸ್ಥಾನದಿಂದ ಹಳೇ ಬಸ್ ನಿಲ್ದಾಣದವರೆಗೂ ರೋಡ್ ಶೋ ನಡೆಯಲಿದೆ. ಈ ರೋಡ್ ಶೋ ಮೂಲಕ ಪ್ರಜ್ವಲ್‌ರೇವಣ್ಣ ಪರ ಬಿ.ವೈ.ವಿಜಯೇಂದ್ರ ಪ್ರಚಾರ ಮಾಡಲಿದ್ದಾರೆ.

 

 

ಫ್ರೆಶ್ ನ್ಯೂಸ್

Latest Posts

Featured Videos