ವಿಜಯಪುರದಲ್ಲಿ ಪ್ರವಾಹ ಭೀತಿ

ವಿಜಯಪುರದಲ್ಲಿ ಪ್ರವಾಹ ಭೀತಿ

ವಿಜಯಪುರ, ಆ. 6: ಮಹಾರಾಷ್ಟ್ರದಿಂದ ಭೀಮಾನದಿಗೆ ಉಜನಿ ಜಲಾಶಯದಿಂದ ಭೀಮಾ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುತ್ತಿರುವ ಕಾರಣ ಸಿಂದಗಿ ತಾಲೂಕಿನ ಹಳ್ಳಿಗಳಲ್ಲಿ ಪ್ರವಾಹ ಭೀತಿ ತಲೆದೋರಿದೆ.
ಮಹಾರಾಷ್ಟ್ರ ರಾಜ್ಯದ ಉಜನಿ ಜಲಾಶಯದಿಂದ ನಿತ್ಯವೂ 1 ಟಿಎಂಸಿ ಅಡಿ ನೀರು ಭೀಮಾ ನದಿಗೆ ಹರಿದು ಬರುತ್ತಿರುವ ಕಾರಣ ಕಲಬುರಗಿ ಜಿಲ್ಲೆಯ ಸೊನ್ನ ಬ್ಯಾರೇಜ್ ಹಿನ್ನೀರಿನಿಂದ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ತಾರಾಪುರ ಗ್ರಾಮದಲ್ಲಿ ಪ್ರವಾಹದ ಭೀತಿ ಸೃಷ್ಟಿಯಾಗಿದೆ.
ಸೊನ್ನ ಬ್ಯಾರೇಜ್ ಹಿನ್ನೀರು ಗ್ರಾಮಕ್ಕೆ ನುಗ್ಗುವ ಭಯದಲ್ಲಿ ಜನರು ಆತಂಕದಿಂದ ಜೀವಿಸುವ ಸ್ಥಿತಿ ನಿರ್ಮಾಣವಾಗಿದೆ.

ನೀರಿನ ಪ್ರಮಾಣ ಹೆಚ್ಚಾದಲ್ಲಿ ರಸ್ತೆ ಸಂಚಾರ ಸ್ಥಗಿತವಾಗುವ ಭೀತಿ ಇದೆ.
ಸಿಂದಗಿ ತಹಶೀಲ್ದಾರ್ ವಿಜಯಕುಮಾರ ಖಡಕಭಾವಿ ತಾರಾಪುರ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲನೆ ನಡೆಇಸಿದ್ದಾರೆ.
ಭೀಮಾ ನದಿಯ ನೀರಿನ ಹರಿವನ್ನು ಅವಲೋಕಿಸುತ್ತಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos