ವಿಮಾನ ನಿಲ್ದಾಣದಲ್ಲಿ ನೀರು ಸೋರಿಕೆ

ವಿಮಾನ ನಿಲ್ದಾಣದಲ್ಲಿ ನೀರು ಸೋರಿಕೆ

ಲಂಡನ್, ಆ. 13 : ಲಂಡನ್ನ ಲುಟನ್ ವಿಮಾನ ನಿಲ್ದಾಣದಲ್ಲಿ ಏಕಾಏಕಿ ಟೆರಸ್ನಿಂದ ಭಾರಿ ಪ್ರಮಾಣದ ನೀರು ಸೋರಿಕೆ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಲಂಡನ್ನಲ್ಲಿ ಸುರಿದ ಭಾರಿ ಮಳೆಯಿಂದ, ವಿಮಾನ ನಿಲ್ದಾಣದಲ್ಲಿ ಏಕಾಏಕಿ ಟೆರಸ್ನಿಂದ ನೀರು ಬೀಳುತ್ತಿದ್ದಂತೆ, ಪ್ರಯಾಣಿಕರು ಗಾಬರಿಗೊಂಡಿದ್ದಾರೆ. ನೀರು ಬೀಳುತ್ತಿರುವ ದೃಶ್ಯವನ್ನು ವಿಡಿಯೋ ಮಾಡಿದ್ದಾರೆ.
ವಿಶ್ವದ ಹೆಚ್ಚು ಬ್ಯುಸಿ ಇರುವ ವಿಮಾನ ನಿಲ್ದಾಣದಲ್ಲಿ ಈ ರೀತಿಯ ಘಟನೆ ನಡೆದಿರುವುದು ಹಲವರಲ್ಲಿ ಅಚ್ಚರಿ ಮೂಡಿಸಿದೆ. ಈ ರೀತಿಯಾಗಲು ಭಾರಿ ಮಳೆ ಹಾಗೂ ಗಾಳಿಯೇ ಕಾರಣವೆಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ. ಇನ್ನು ಈ ರೀತಿ ಭಾರಿ ಪ್ರಮಾಣದ ನೀರು ಸೋರಿಕೆಯಾಗುತ್ತಿದ್ದರಿಂದ ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ವಿಡಿಯೋ ಇದೀಗ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ವಿಮಾನ ನಿಲ್ದಾಣದ ಬಗ್ಗೆ ಟೀಕಾ ಪ್ರಹಾರ ನಡೆಸುತ್ತಿದ್ದು, ಇನ್ನು ಕೆಲವರು ಟ್ರೋಲ್ ಮಾಡುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos