ವೈರಲ್ ಆಯ್ತು ಐರಾ ವಿಡಿಯೋ

ವೈರಲ್ ಆಯ್ತು ಐರಾ ವಿಡಿಯೋ

ಬೆಂಗಳೂರು, ಅ. 28: ಯಶ್ ಹಾಗೂ ರಾಧಿಕಾ ಪಂಡಿತ್ ಮುದ್ದು ಮಗಳು ಐರಾ ಜೊತೆ ಸೇರಿ ದೀಪಾವಳಿ ಹಬ್ಬಕ್ಕೆ ಶುಭ ಕೋರಿದ್ದಾರೆ.

ಯಶ್ ಹಾಗೂ ರಾಧಿಕಾ ಐರಾ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಸೆಲ್ಫಿ ಫೋಟೋವನ್ನು ಅವರು ತಮ್ಮ ಇನ್ಸ್ಟಾಗ್ರಾಂ ಮತ್ತು ಫೇಸ್ಬುಕ್ನಲ್ಲಿ ಹಂಚಿಕೊಂಡು ಅದಕ್ಕೆ, “ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು” ಎಂದು ಬರೆದುಕೊಂಡಿದ್ದಾರೆ.

ಇತ್ತ ಯಶ್ ಅವರು ಕೂಡ ವಿಡಿಯೋ ಮೂಲಕ ಹಬ್ಬಕ್ಕೆ ಶುಭ ಕೋರಿದ್ದಾರೆ. ವಿಡಿಯೋದಲ್ಲಿ ಯಶ್, ಐರಾಳನ್ನು ಎತ್ತಿಕೊಂಡಿದ್ದು, ರಾಧಿಕಾ ಪಕ್ಕದಲ್ಲಿ ಕುಳಿತುಕೊಂಡಿದ್ದಾರೆ. ಮೊದಲಿಗೆ ಹ್ಯಾಪಿ ದೀಪಾವಳಿ ಮಗಳೇ ಎಂದು ಯಶ್ ಶುಭಾಶಯ ತಿಳಿಸಿದ್ದಾರೆ. ಇದೇ ವೇಳೆ ರಾಧಿಕಾ ಅವರು ಶುಭಾಶಯ ತಿಳಿಸಿದ್ದಾರೆ. ಆಗ ಐರಾ ತನ್ನದೇ ಭಾಷೆಯಲ್ಲಿ ಮಾತನಾಡಿದ್ದಾರೆ. ನಂತರ ಮತ್ತೆ ಯಶ್, ಎಲ್ಲರಿಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು” ಎಂದು ಶುಭ ಕೋರಿದ್ದಾರೆ.

 

 

ಫ್ರೆಶ್ ನ್ಯೂಸ್

Latest Posts

Featured Videos