ಭೂತಾನಲ್ಲಿ ವಿರಾಟ್ ರಜಾ ಮಜಾ!

ಭೂತಾನಲ್ಲಿ ವಿರಾಟ್ ರಜಾ ಮಜಾ!

ನವದೆಹಲಿ,ನ. 5 : ಪ್ರಸ್ತುತ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ರಜಾ ದಿನವನ್ನು ತಮ್ಮ ಪತ್ನಿ ಅನುಷ್ಕಾ ಶರ್ಮಾ ಜೊತೆಗೆ ಭೂತಾನ್ನಲ್ಲಿ ರಜಾದಿನ ಎಂಜಾಯ್ ಮಾಡುತ್ತಿದ್ದಾರೆ. ಮೋಜು ಮಸ್ತಿ ಮಾಡುತ್ತಿರುವ ಪೋಟೋವನ್ನು ಇನ್ಸ್ಟಾ ಗ್ರಾಂ ನಲ್ಲಿ ಪೋಸ್ಟ್ ಮಾಡಿದ್ದಾರೆ. ಕೊಹ್ಲಿ ತಮ್ಮ 31ನೇ ಹುಟ್ಟುಹಬ್ಬಮಂಗಳವಾರ ಆಚರಿಸಿಕೊಳ್ಳಲಿದ್ದಾರೆ.
ಅನುಷ್ಕಾ ಶರ್ಮಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕೆಲವು ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಅಷ್ಟೇ ಅಲ್ಲ ಅಭಿಮಾನಿಗಳ ಜೊತೆಗೆ ಬಾಲ್ಯದ ನೆನಪುಗಳನ್ನು ಹಾಗೂ ಪರ್ವತಗಳಲ್ಲಿ ಪಾದಯಾತ್ರೆ ಮಾಡುವ ದೃಶ್ಯವನ್ನು ಅನುಷ್ಕಾ ಹಂಚಿಕೊಂಡಿದ್ದಾರೆ.
ಬಾಂಗ್ಲಾದೇಶದ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟಿ-20 ಸರಣಿಯಲ್ಲಿ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ವಿರಾಟ್ ಹಾಗೂ ಅನುಷ್ಕಾ ದಂಪತಿ ಜಾಲಿ ಟ್ರಿಪ್ ಮೂಡ್ನಲ್ಲಿದ್ದಾರೆ. ಅವರ ಪ್ರವಾಸದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ಆದರೆ ವಿರಾಟ್ ಕೊಹ್ಲಿ ಮಾತ್ರ ಯಾವುದೇ ಫೋಟೋ ಹಾಗೂ ವಿಡಿಯೋವನ್ನು ಅಭಿಮಾನಿಗಳ ಜೊತೆಗೆ ಹಂಚಿಕೊಂಡಿಲ್ಲ.

ಫ್ರೆಶ್ ನ್ಯೂಸ್

Latest Posts

Featured Videos