ಬೆಂಗಳೂರು: ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಟೆಸ್ಟ್ ಪಂದ್ಯಗಳು ಈಗಾಗಲೇ ಆರಂಭವಾಗಿದ್ದು ಮೊದಲೆರಡು ಪಂದ್ಯಗಳಲ್ಲಿ ವಿರಟ್ ಕೊಹ್ಲಿ ಅವರು ವೈಯಕ್ತಿಕ ಕಾರಣಗಳಿಂದ ಟೆಸ್ಟ್ ಪಂದ್ಯದಿಂದ ದೂರ ಉಳಿದಿದ್ದರು. ಇಂಗ್ಲೆಂಡ್ ವಿರುದ್ಧದ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಂದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದ ಮೊದಲೆರಡು ಪಂದ್ಯಗಳಲ್ಲಿ ಕೊಹ್ಲಿ ಕಾಣಿಸಿಕೊಂಡಿರಲಿಲ್ಲ. ಇದಾಗ್ಯೂ 3ನೇ ಟೆಸ್ಟ್ ಪಂದ್ಯದ ವೇಳೆ ಅವರು ತಂಡವನ್ನು ಕೂಡಿಕೊಳ್ಳಲಿದ್ದಾರೆ ಎನ್ನಲಾಗಿತ್ತು.
ಕಳೆದ 13 ವರ್ಷಗಳಲ್ಲಿ ವಿರಾಟ್ ಕೊಹ್ಲಿ ಸಂಪೂರ್ಣ ಟೆಸ್ಟ್ ಸರಣಿ ತಪ್ಪಿಸಿಕೊಳ್ಳುತ್ತಿರುವುದು ಇದೇ ಮೊದಲ ಬಾರಿಗೆ ಎಂಬುದು ವಿಶೇಷ. ಅಂದರೆ 2011 ರಲ್ಲಿ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದ ಕೊಹ್ಲಿ ಆ ಬಳಿಕ ಯಾವತ್ತೂ ಸಂಪೂರ್ಣ ಟೆಸ್ಟ್ ಸರಣಿಯಿಂದ ಹೊರಗುಳಿದಿರಲಿಲ್ಲ.
ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ಫೆಬ್ರವರಿ 15 ರಿಂದ ಶುರುವಾಗಲಿದೆ. ಈ ಪಂದ್ಯಕ್ಕೆ ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ಆತಿಥ್ಯವಹಿಸಲಿದೆ. ಇನ್ನು 4ನೇ ಟೆಸ್ಟ್ ಪಂದ್ಯವು ಫೆಬ್ರವರಿ 23 ರಿಂದ ರಾಂಚಿಯಲ್ಲಿ ಶುರುವಾಗಲಿದೆ. ಹಾಗೆಯೇ ಮಾರ್ಚ್ 7 ರಿಂದ ಶುರುವಾಗಲಿರುವ 5ನೇ ಪಂದ್ಯವು ಧರ್ಮಶಾಲಾದ HPCA ಮೈದಾನದಲ್ಲಿ ನಡೆಯಲಿದೆ.