ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಕೊಹ್ಲಿ

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಕೊಹ್ಲಿ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ ಎನ್ನುವುದು ಚಿಕ್ಕ ಕ್ರೀಡೆಯಾಗಿ ಉಳಿದಿಲ್ಲ ಒಂದು ದೊಡ್ಡ ಕ್ರೀಡೆಯಾಗಿ ಬೆಳೆದಿದೆ, ಕ್ರಿಕೆಟ್ ಎನ್ನುವುದು ನಮ್ಮ ಎಮೋಷನ್ ಆಗಿದೆ. ಏಷ್ಯಾಕಪ್ನಲ್ಲಿ ಪಾಕಿಸ್ತಾನ ವಿರುದ್ಧ ವಿರಾಟ್ ಕೊಹ್ಲಿ ನೀಡಿದ ಅದ್ಭುತ ಪ್ರದರ್ಶನಕ್ಕೆ ಪಂದ್ಯಶ್ರೇಷ್ಠ ಪ್ರಶಸ್ತಿ ಒದಗಿಬಂತು. ಆದರೆ, ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸುವ ವೇಳೆ ವಿರಾಟ್ ಆಡಿದ ಕೆಲವು ಮಾತುಗಳು ಇದೀಗ ವೈರಲ್ ಆಗುತ್ತಿದೆ.
ಏಷ್ಯಾಕಪ್ 2023ರ ಸೂಪರ್ -4 ಹಂತದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ಜಯ ಸಾಧಿಸಲು ವಿರಾಟ್ ಕೊಹ್ಲಿ ಪ್ರಮುಖ ಪಾತ್ರವಹಿಸಿದರು. ಕೇವಲ 94 ಎಸೆತಗಳಲ್ಲಿ 9 ಫೋರ್, 3 ಸಿಕ್ಸರ್ ಸಿಡಿಸಿದ ಕೊಹ್ಲಿ ಅಜೇಯ 122 ರನ್ ಚಚ್ಚಿದರು. ಇದರ ಜೊತೆಗೆ ಹಲವು ದಾಖಲೆ ಕೂಡ ನಿರ್ಮಾಣ ಮಾಡಿದರು.
ತಂಡಕ್ಕೆ ವಿವಿಧ ರೀತಿಯಲ್ಲಿ ಸಹಾಯ ಮಾಡಲು ನಾನು ಯಾವಾಗಲೂ ಸಿದ್ಧನಿದ್ದೇನೆ. ಇಂದು, ಕೆಎಲ್ ರಾಹುಲ್ ಉತ್ತಮ ಆರಂಭವನ್ನು ತಂದುಕೊಟ್ಟರು. ಈ ಸಂದರ್ಭ ನನ್ನ ಕೆಲಸವು ಕೇವಲ ಸ್ಟ್ರೈಕ್ ಅನ್ನು ರೊಟೆಟ್ ಮಾಡುವುದು ಆಗಿತ್ತು. ಸುಲಭವಾಗಿ ರನ್ ಗಳಿಸಲು ನಾನು ಹೆಚ್ಚು ಪ್ರಯತ್ನಿಸುತ್ತೇನೆ ಎಂಬುದು ಕೊಹ್ಲಿ ಮಾತು.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ರೋಹಿತ್, ಗಿಲ್ ಅರ್ಧಶತಕ, ಕೊಹ್ಲಿ, ರಾಹುಲ್ ಶತಕದ ನೆರಿವಿನಿಂದ 50 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 356 ರನ್ ಗಳಿಸಿತು. ಟಾರ್ಗೆಟ್ ಬೆನ್ನಟ್ಟಿದ ಪಾಕಿಸ್ತಾನ 32 ಓವರ್ಗಳಲ್ಲಿ ಕೇವಲ 128 ರನ್ಗಳಿಗೆ ಆಲೌಟ್ ಆಯಿತು. ಭಾರತ ಪರ ಕುಲ್ದೀಪ್ ಯಾದವ್ 5 ಓವರ್ಗೆ 26 ರನ್ ನೀಡಿ 5 ವಿಕೆಟ್ ಕಬಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos